ನವದೆಹಲಿ: ಹಿಜಾಬ್ ಹೆಸರಿನಲ್ಲಿ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ದೇಶದ ಹೆಣ್ಣುಮಕ್ಕಳ ಭವಿಷ್ಯವನ್ನು ಕದಿಯಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ತಿಕ್ಕಾಟ ರಾಜಕೀಯ ಸ್ವರೂಪ ಪಡೆದಿರುವ ಬೆನ್ನಲ್ಲೇ ಈ ವಿಚಾರವಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಹಿಜಾಬ್ | ರಾಜಕೀಯ ‘ಅಮಲು’: ಕಾಂಗ್ರೆಸ್–ಬಿಜೆಪಿ ಮಧ್ಯೆ ವಾಕ್ಸಮರ

‘ಶಿಕ್ಷಣದ ಹಾದಿಯಲ್ಲಿ ಹಿಜಾಬ್ ಅಡ್ಡಿಯಾಗುವಂತೆ ಮಾಡುವ ಮೂಲಕ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ನಾವು ಕದಿಯುತ್ತಿದ್ದೇವೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ಕೊಡುತ್ತಾಳೆ. ಆಕೆ ತಾರತಮ್ಯ ಮಾಡುವುದಿಲ್ಲ’ ಎಂದು ರಾಹುಲ್ ಗಾಂಧಿ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಕಾಲೇಜುಗಳಲ್ಲಿ ಪ್ರವೇಶ ನಿರಾಕರಿಸಿದ ವಿಚಾರ ಉಡುಪಿ ಹಾಗೂ ಕುಂದಾಪುರದಲ್ಲಿ ವರದಿಯಾಗಿತ್ತು. ಬಳಿಕ ಬೆಳಗಾವಿ ರಾಮದುರ್ಗದ ಕಾಲೇಜಿನಲ್ಲೂ ಇದೇ ರೀತಿಯ ವಿದ್ಯಮಾನ ನಡೆದಿತ್ತು. ಸದ್ಯ ಈ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ವಾಕ್ಸಮರ ತಾರಕಕ್ಕೇರಿದೆ.

ಇದನ್ನೂ ಓದಿ:ಹಿಜಾಬ್ ಬೇಕೆನ್ನುವವರು ಮದರಸಕ್ಕೆ ಹೋಗಲಿ: ಸಂಸದ ಪ್ರತಾಪ ಸಿಂಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.