ಗುರುವಾರ , ಸೆಪ್ಟೆಂಬರ್ 23, 2021
24 °C

ವೈಷ್ಣೋದೇವಿ ದರ್ಶನ ಪಡೆಯಲು 14 ಕಿ.ಮೀ ಕಾಲ್ನಡಿಗೆಯಲ್ಲಿ ಸಾಗಿದ ರಾಹುಲ್‌ ಗಾಂಧಿ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮುವಿನ ರಿಯಾಸಿ ಜಿಲ್ಲೆಯ ತ್ರಿಕುಟಾ ಬೆಟ್ಟದಲ್ಲಿರುವ ಹೆಸರಾಂತ ಯಾತ್ರಾ ಸ್ಥಳ ವೈಷ್ಣೋದೇವಿ ಗುಹೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಾಲ್ನಡಿಗೆಯಲ್ಲಿ ಸಾಗಿದ್ದಾರೆ.

ಜಮ್ಮುವಿನ ಕಾತ್ರಾದಿಂದ 14 ಕಿ.ಮೀ ದೂರದಲ್ಲಿರುವ ವೈಷ್ಣೋದೇವಿ ಗುಹೆಗೆ ಕಾಲ್ನಡಿಗೆಯಲ್ಲಿ ಸಾಗಿದ ರಾಹುಲ್‌ ಗಾಂಧಿ ಶುಕ್ರವಾರ ದೇವಿಯ ದರ್ಶನ ಪಡೆದಿದ್ದಾರೆ.

ಪ್ರಯಾಣದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಹುಲ್‌, 'ನಾನು ವೈಷ್ಣೋಮಾತೆಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದೇನೆ. ಈ ಸಮಯದಲ್ಲಿ ಯಾವುದೇ ರಾಜಕೀಯ ಹೇಳಿಕೆಗಳನ್ನು ನೀಡಲು ಬಯಸುವುದಿಲ್ಲ' ಎಂದು ತಿಳಿಸಿದ್ದಾರೆ.

ಯಾತ್ರಾರ್ಥಿಗಳು, ಸ್ಥಳೀಯ ಕಾಂಗ್ರೆಸ್‌ ಮುಖಂಡರು ಮತ್ತು ಭದ್ರತಾ ಸಿಬ್ಬಂದಿ ರಾಹುಲ್‌ ಅವರಿಗೆ ಸಾಥ್‌ ನೀಡಿದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು