ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿ ಪ್ರಜಾಪ್ರಭುತ್ವ ಸಾಯುತ್ತಿದೆ: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

Last Updated 5 ಆಗಸ್ಟ್ 2022, 6:31 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವ ಸಾಯುತ್ತಿದೆ. ಏಕಚಕ್ರಾಧಿಪತ್ಯ ಹೆಚ್ಚಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಲೆ ಏರಿಕೆ ಮತ್ತು ನಿರುದ್ಯೋಗ ಹೆಚ್ಚಳದ ವಿರುದ್ಧ ಕಾಂಗ್ರೆಸ್ ಶುಕ್ರವಾರ ರಾಷ್ಟ್ರವ್ಯಾಪಿ ಪ್ರತಿಭಟನೆ ಕೈಗೊಂಡಿರುವ ಬೆನ್ನಲ್ಲೇ, ನವದೆಹಲಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನಸಾಮಾನ್ಯರ ಕುರಿತು ಚಿಂತಿಸುತ್ತಿಲ್ಲ. 4–5 ಮಂದಿಯ ಹಿತ ಕಾಯಲಷ್ಟೇ ಕೆಲಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಬೆಲೆ ಏರಿಕೆ ತಡೆಯಲು ಮತ್ತು ಜನರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಯಾವುದೇ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಹಿಟ್ಲರ್ ಕೂಡ ಎಲ್ಲ ಚುನಾವಣೆಯನ್ನು ಗೆಲ್ಲುತ್ತಿದ್ದ. ನನಗೂ ವ್ಯವಸ್ಥೆಯ ನಿಯಂತ್ರಣ ಕೊಡಿ, ನಾನು ಕೂಡ ಚುನಾವಣೆಯನ್ನು ಹೇಗೆ ಗೆಲ್ಲಬಹುದು ಎನ್ನುವುದನ್ನು ತೋರಿಸಿಕೊಡುತ್ತೇನೆ ಎಂದು ರಾಹುಲ್ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಭಾರತ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಶತಮಾನದಿಂದ ಹಂತಹಂತವಾಗಿ ನಿರ್ಮಿಸಲಾಗಿದೆ. ಆದರೆ ಅದು ಇಂದು ನಮ್ಮ ಕಣ್ಣೆದುರೇ ನಾಶವಾಗುತ್ತಿದೆ ಎಂದು ರಾಹುಲ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT