ರೈತರು ಪ್ರತಿಭಟನೆ ಹಿಂಪಡೆಯುವುದಿಲ್ಲ, ಸರ್ಕಾರವೇ ಏನಾದರೂ ಮಾಡಬೇಕು: ರಾಹುಲ್ ಗಾಂಧಿ

ನವದೆಹಲಿ: ಕೇಂದ್ರ ಸರ್ಕಾರ ರೈತರ ಬಗ್ಗೆ ಕಾಳಜಿ ವಹಿಸುತ್ತಿಲ್ಲ, ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ‘ರೈತರು ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂದಕ್ಕೆ ಪಡೆಯುವುದಿಲ್ಲ. ಈಗ ನಡೆಯುತ್ತಿರುವ ಪ್ರತಿಭಟನೆಯನ್ನು ಮುಂದುವರಿಸಲಾಗುತ್ತದೆ. ಹೀಗಾಗಿ ಸರ್ಕಾರವೇ ಜಾರಿಗೆ ತರಲು ಹೊರಟಿರುವ ಕೃಷಿ ಕಾಯಿದೆಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.
ರೈತರ ಪ್ರತಿಭಟನೆಯಿಂದ ಜನರಿಗೆ, ದೇಶದ ಇಮೇಜ್‌ಗೆ ಧಕ್ಕೆಯಾಗುತ್ತಿದೆ. ಅದನ್ನು ಮೊದಲು ಸರಿಪಡಿಸಬೇಕು. ರೈತರ ಪ್ರತಿಭಟನೆಯಿಂದ ಕೇವಲ ರೈತರಿಗೆ ಮಾತ್ರವಲ್ಲದೆ, ಅಧಿಕಾರಿಗಳು, ಪತ್ರಕರ್ತರು, ಜನಸಾಮಾನ್ಯರಿಗೂ ತೊಂದರೆಯಾಗುತ್ತಿದೆ. ರೈತರನ್ನು ಹೀಗೆ ನಡೆಸಿಕೊಳ್ಳುವುದು ಸರಿಯಲ್ಲ ಎಂದು ರಾಹುಲ್ ಹೇಳಿದ್ದಾರೆ.
Mr Modi, do the job you’ve been elected to do. pic.twitter.com/FqGH5CEIJg
— Rahul Gandhi (@RahulGandhi) February 3, 2021
ಇದನ್ನೂ ಓದಿ: ರೈತರ ಪ್ರತಿಭಟನೆ: ಖಾತೆಗಳ ಮರುಸ್ಥಾಪಿಸಿದ್ದಕ್ಕೆ ಟ್ವಿಟರ್ಗೆ ನೋಟಿಸ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.