ಶನಿವಾರ, ಅಕ್ಟೋಬರ್ 31, 2020
21 °C

ಮನಮೋಹನ್‌ ಸಿಂಗ್ ಜನ್ಮದಿನ: ಶುಭ ಹಾರೈಸಿದ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

Manmohan Singh

ನವದೆಹಲಿ: ಮಾಜಿ ಪ್ರಧಾನಿ, ಕಾಂಗ್ರೆಸ್‌ನ ಹಿರಿಯ ನಾಯಕ ಡಾ.ಮನಮೋಹನ್ ಸಿಂಗ್ ಅವರ 88ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಭ ಹಾರೈಸಿದ್ದಾರೆ.

‘ಡಾ.ಮನಮೋಹನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಗವಂತನು ಅವರಿಗೆ ಆಯಸ್ಸು, ಉತ್ತಮ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘ಮನಮೋಹನ್ ಸಿಂಗ್ ಅವರಂತಹ ಆಳವಾದ ಜ್ಞಾನವುಳ್ಳ ಪ್ರಧಾನಿಯ ಕೊರತೆ ಇಂದು ಭಾರತದಲ್ಲಿ ಎದ್ದು ಕಾಣುತ್ತಿದೆ. ಅವರ ಪ್ರಮಾಣಿಕತೆ, ಸಭ್ಯತೆ ಮತ್ತು ಸಮರ್ಪಣಾ ಮನೋಭಾವ ನಮಗೆಲ್ಲ ಸ್ಫೂರ್ತಿಯ ಮೂಲ. ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 

ಕಾಂಗ್ರೆಸ್‌ ಪಕ್ಷದ ಅಧಿಕೃತ ಟ್ವಿಟರ್‌ ಖಾತೆಯಿಂದಲೂ ಸಿಂಗ್ ಅವರಿಗೆ ಶುಭ ಹಾರೈಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು