ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿವಾರವಾದ ಕುರಿತ ಪ್ರಧಾನಿ ಮೋದಿ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ ಏನು?

Last Updated 15 ಆಗಸ್ಟ್ 2022, 9:36 IST
ಅಕ್ಷರ ಗಾತ್ರ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ‘ಪರಿವಾರವಾದ’ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಿರಾಕರಿಸಿದ್ದಾರೆ.

‘ಇಂಥ ವಿಚಾರಗಳ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು’ ಎಂದು ರಾಹುಲ್ ಹೇಳಿದ್ದಾರೆ.

ಮೋದಿ ಅವರು ಭಾಷಣದಲ್ಲಿ ಪ್ರಸ್ತಾಪಿಸಿದ ‘ಪರಿವಾರವಾದ’ ಹೇಳಿಕೆ ಬಗ್ಗೆ ರಾಹುಲ್ ಅವರನ್ನು ಪ್ರಶ್ನಿಸಲಾಯಿತು. ಈ ವೇಳೆ ಅವರು ಪ್ರತಿಕ್ರಿಯಿಸಲು ನಿರಾಕರಿಸಿದರು ಎಂದು ‘ಎಎನ್‌ಐ’ ಸುದ್ದಿ ಸಂಸ್ಥೆ ವಿಡಿಯೊ ಸಹಿತ ಟ್ವೀಟ್ ಮಾಡಿದೆ.

ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದ ಮೋದಿ, ದೇಶದ ಮುಂದಿರುವ ಎರಡು ಬಹುಮುಖ್ಯ ಸವಾಲಿನ ಬಗ್ಗೆ ಎಚ್ಚರಿಸಿದ್ದರು.

‘ಇಂದು ನಾವು ಎರಡು ದೊಡ್ಡ ಸವಾಲುಗಳನ್ನು ಎದುರಿಸುತ್ತಿದ್ದೇವೆ. ಅವುಗಳೆಂದರೆ, ಭ್ರಷ್ಟಾಚಾರ, ಪರಿವಾರವಾದ ಅಥವಾ ಸ್ವಜನಪಕ್ಷಪಾತ. ಭ್ರಷ್ಟಾಚಾರ ದೇಶವನ್ನು ಗೆದ್ದಲಿನಂತೆ ಟೊಳ್ಳು ಮಾಡುತ್ತಿದೆ. ನಾವು ಅದರ ವಿರುದ್ಧ ಹೋರಾಡಬೇಕಾಗಿದೆ. ಈ ಹೋರಾಟದಲ್ಲಿ ನಾನು ಎಲ್ಲಾ ಭಾರತೀಯರ ಬೆಂಬಲವನ್ನು ಕೋರುತ್ತೇನೆ. ನಮ್ಮ ಸಂಸ್ಥೆಗಳ ಶಕ್ತಿಯನ್ನು ಅರಿತುಕೊಳ್ಳಲು, ಅರ್ಹತೆಯ ಆಧಾರದ ಮೇಲೆ ದೇಶವನ್ನು ಮುನ್ನಡೆಸಲು 'ಪರಿವಾರವಾದ'ದ ವಿರುದ್ಧ ನಾವು ಜಾಗೃತಿ ಮೂಡಿಸಬೇಕಿದೆ ಎಂದು ಮೋದಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT