ಶುಕ್ರವಾರ, ಆಗಸ್ಟ್ 6, 2021
22 °C

ಕೇಂದ್ರದ ಕೋವಿಡ್ ನಿರ್ವಹಣೆ ‘ವಿನಾಶಕಾರಿ‘: ‘ಶ್ವೇತಪತ್ರ‘ ಬಿಡುಗಡೆ ಮಾಡಿದ ರಾಹುಲ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇಂದ್ರ ಸರ್ಕಾರದ ಕೋವಿಡ್ ನಿರ್ವಹಣೆ ಕುರಿತು ಕಾಂಗ್ರೆಸ್‌ ಮಂಗಳವಾರ ‘ಶ್ವೇತ ಪತ್ರ‘ ಬಿಡುಗಡೆ ಮಾಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇದನ್ನು ಬಿಡುಗಡೆ ಮಾಡಿದ್ದು, ಮೂರನೇ ಅಲೆಯನ್ನು ಸಮರ್ಪಕವಾಗಿ ಎದುರಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

‘ಕೋವಿಡ್‌‘ನ ಮೊದಲ ಮತ್ತು ಎರಡನೇ ಅಲೆ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ನಿರ್ವಹಣೆ ‘ವಿನಾಶಕಾರಿ‘ಯಾಗಿರುವುದು ಸ್ಪಷ್ಟವಾಗಿದೆ. ಅದು ಯಾವ ರೀತಿ ವಿನಾಶಕಾರಿಯಾಗಿದೆ, ಸರ್ಕಾರ ಎಲ್ಲೆಲ್ಲಿ ಎಡವಿದೆ, ಎಂಬುದನ್ನು ಈ ಶ್ವೇತಪತ್ರದಲ್ಲಿ ಎತ್ತಿ ತೋರಿಸಲು ಪ್ರಯತ್ನಿಸಿದ್ದೇವೆ‘ ಎಂದು ರಾಹುಲ್‌ ಗಾಂಧಿ ಹೇಳಿದರು.

ಕೋವಿಡ್ ನಿರ್ವಹಣೆಯಲ್ಲಿ ಏನು ತಪ್ಪಾಗಿದೆ ಎಂಬುದರ ಕುರಿತು ಸರ್ಕಾರಕ್ಕೆ ಮಾಹಿತಿ ಮತ್ತು ಒಳನೋಟಗಳನ್ನು ಒದಗಿಸುವುದು ನಮ್ಮ ಉದ್ದೇಶ ಎಂದು ಹೇಳಿದ ರಾಹುಲ್, 'ಸರ್ಕಾರದತ್ತ ಬೊಟ್ಟು ಮಾಡಿ ತೋರಿಸುವುದಷ್ಟೇ ನಮ್ಮ ಉದ್ದೇಶವಲ್ಲ. ಹಿಂದೆ ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು, ಮೂರನೇ ಅಲೆ ಎದುರಿಸಲು ಸಿದ್ಧವಾಗಲು ಸಹಾಯ ಮಾಡುವುದು ಈ ಶ್ವೇತಪತ್ರದ ಉದ್ದೇಶವಾಗಿದೆ‘ ಎಂದು ಹೇಳಿದರು.

‌ಕೋವಿಡ್ ವಿರುದ್ಧ ಹೋರಾಡುವುದಕ್ಕಿರುವ ಏಕೈಕ ಪ್ರಮುಖ ಅಸ್ತ ಲಸಿಕೆ ಎಂದು ಪ್ರತಿಪಾದಿಸಿದ ಅವರು, ‘ಸಾಧ್ಯವಾದಷ್ಟು ಬೇಗ ಶೇ 100 ರಷ್ಟು ಲಸಿಕೆ ಗುರಿಯನ್ನು ತಲುಪಬೇಕು‘ ಎಂದು ಒತ್ತಾಯಿಸಿದರು.

ಕೋವಿಡ್‌ 19 ಲಸಿಕೆ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ‍ಪಕ್ಷಪಾತ ಮಾಡದೆ ಎಲ್ಲ ರಾಜ್ಯಗಳನ್ನು ಸಮವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು