ಗುರುವಾರ , ಆಗಸ್ಟ್ 11, 2022
21 °C

ಸರ್ಕಾರಕ್ಕೆ ಪ್ರಜಾಪ್ರಭುತ್ವದಿಂದ ಮುಕ್ತಿ ಬೇಕಾಗಿದೆ: ರಾಹುಲ್‌ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸರ್ಕಾರವು ಪ್ರಜಾಪ್ರಭುತ್ವದಿಂದ ಮುಕ್ತಿ ಪಡೆಯಲು ಬಯಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಆರೋಪಿಸಿದ್ದಾರೆ.

‘ನಮ್ಮಲ್ಲಿ ಪ್ರಜಾಪ್ರಭುತ್ವ ತುಂಬಾ ಇದೆ. ಹಾಗಾಗಿ ಭಾರತದಲ್ಲಿ ಸುಧಾರಣೆ ತರಲು ಬಹಳ ಕಷ್ಟವಿದೆ. ಗಣಿಗಾರಿಕೆ, ಕೃಷಿ, ಕಲ್ಲಿದ್ದಲ್ಲು ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ತರಲು ರಾಜಕೀಯ ಇ‌ಚ್ಛಾಶಕ್ತಿ ಕೂಡ ಬೇಕು’ ಎಂದು ನೀತಿ ಆಯೋಗದ ಸಿಇಒ ಅಮಿತಾಬ್‌ ಕಾಂತ್‌ ಅವರು ಮಂಗಳವಾರ ನಡೆದ ವರ್ಚುವಲ್‌ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.

ಇದರ ಬೆನ್ನಲ್ಲೇ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ ಅವರು,‘ ಪ್ರಧಾನಿ ಮೋದಿ ಅವರ ಆಡಳಿತ ಸುಧಾರಣೆಯು ಕಳ್ಳತನಕ್ಕೆ ಸಮಾನವಾಗಿದೆ. ಹಾಗಾಗಿ ಅವರು ಪ್ರಜಾಪ್ರಭುತ್ವದಿಂದ ಮುಕ್ತಿ ಪಡೆಯಲು ಬಯಸುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು