ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳು ‘ಪರೀಕ್ಷಾ ಪೆ ಚರ್ಚಾ’ ಬಯಸುತ್ತಿದ್ದಾರೆ: ರಾಹುಲ್ ಗಾಂಧಿ

Last Updated 30 ಆಗಸ್ಟ್ 2020, 14:11 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನೀಟ್, ಜೆಇಇ ಪರೀಕ್ಷೆ ಸಮಸ್ಯೆಗಳ ಬಗ್ಗೆ ಮಾತನಾಡಬಹುದು ಎಂದು ವಿದ್ಯಾರ್ಥಿಗಳು ಭಾವಿಸಿದ್ದರು. ಆದರೆ ಅವರು ಆಟಿಕೆಗಳ ಬಗ್ಗೆ ಮಾತನಾಡಿದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

‘ಮನ್ ಕಿ ಬಾತ್’ ರೇಡಿಯೊ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿಯವರು, ‘ದೇಶೀಯವಾಗಿ ಆಟಿಕೆಗಳನ್ನು ಅಭಿವೃದ್ಧಿಪಡಿಸಲು ಇದು ಸಕಾಲವಾಗಿದ್ದು, ಸ್ಥಳೀಯವಾಗಿ ಆಟಿಕೆಗಳ ತಯಾರಿಸಲು ಹೊಸದಾಗಿ ನವೋದ್ಯಮಗಳನ್ನು ಆರಂಭಿಸಬೇಕೆಂದು’ ಹೇಳಿದ್ದರು.

ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ‘ಜಿಇಇ–ನೀಟ್ ಅಭ್ಯರ್ಥಿಗಳು ಪ್ರಧಾನಿಯವರಿಂದ ‘ಪರೀಕ್ಷಾ ಪೆ ಚರ್ಚಾ’ ಬಯಸಿದ್ದರು. ಆದರೆ ಪ್ರಧಾನಿಯವರು ‘ಖಿಲೋನೆ ಪೆ ಚರ್ಚಾ’ ಮಾಡಿದರು’ ಎಂದು ಉಲ್ಲೇಖಿಸಿದ್ದಾರೆ.

ಸೆಪ್ಟೆಂಬರ್ 1ರಿಂದ ಆರಂಭಗೊಳ್ಳಲಿರುವ ಜಿಇಇ–ನೀಟ್ ಪರೀಕ್ಷೆಗಳನ್ನು ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಮುಂದೂಡಬೇಕು ಎಂದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ. ಹಲವೆಡೆ ಈಗಾಗಲೇ ಪ್ರತಿಭಟನೆಯನ್ನೂ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT