ಗುರುವಾರ , ಮೇ 26, 2022
28 °C

ಕೇಂದ್ರ ಸರ್ಕಾರದಿಂದ ಜನ ಸಾಮಾನ್ಯರ ಲೂಟಿ: ರಾಹುಲ್

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವೆದಹಲಿ: ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್ ಬೆಲೆ ಏರಿಕೆಯನ್ನು ಬಲವಾಗಿ ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಜನ ಸಾಮಾನ್ಯರ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಜನ ಸಾಮಾನ್ಯರ ಲೂಟಿ. ಇಬ್ಬರ ಮಾತ್ರ ಅಭಿವೃದ್ದಿ ಎಂದು ವಾಗ್ದಾಳಿ ನಡೆಸಲಾಗಿದೆ.

ಫೆಬ್ರುವರಿ 14 ಭಾನುವಾರದಂದು ಅಡುಗೆ ಅನಿಲ ಪ್ರತಿ ಸಿಲಿಂಡರ್ ದರದಲ್ಲಿ ₹50 ಏರಿಕೆಯಾಗಿತ್ತು.

 

 

 

ದೇಶದಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಇದರ ಬೆನ್ನಲ್ಲೇ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲೂ ಏರಿಕೆ ಕಂಡುಬಂದಿದೆ.

ಇದನ್ನೂ ಓದಿ: 

 

ಈ ಮೊದಲು ಪ್ರಧಾನಿ ನರೇಂದ್ರ ಮೋದಿ, ಹೊಸ ಕೃಷಿ ಕಾಯ್ದೆ ಮೂಲಕ ದೇಶದ ಸಂಪತ್ತನ್ನು ತಮ್ಮ ಉದ್ಯಮ ಮಿತ್ರರಿಗೆ ಹಂಚಲು ಮುಕ್ತ ಮಾರ್ಗ ಕಲ್ಪಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು