ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಪಿಜಿ ದರ ಏರಿಕೆ: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

Last Updated 1 ಸೆಪ್ಟೆಂಬರ್ 2021, 7:12 IST
ಅಕ್ಷರ ಗಾತ್ರ

ನವದೆಹಲಿ: ಗೃಹ ಬಳಕೆಯ ಅಡುಗೆ ಅನಿಲದ ದರ ಏರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ‘ಸಾರ್ವಜನಿಕರನ್ನು ಖಾಲಿ ಹೊಟ್ಟೆಯಲ್ಲಿ ಮಲಗುವಂತೆ ಮಾಡುತ್ತಿರುವವರು, ತಾವು ಮಾತ್ರ ಸ್ನೇಹಿತರ ನೆರಳಿನಲ್ಲಿ ಮಲಗುತ್ತಿದ್ದಾರೆ‘ ಎಂದು ಟೀಕಿಸಿದ್ದಾರೆ.

ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಅವರು, ‘ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದೇಶದ ಜನರು ಒಗ್ಗಟ್ಟಿನಿಂದ ಹೋರಾಡಲಿದ್ದಾರೆ‘ ಎಂದು ಹೇಳಿದ್ದಾರೆ.

"#IndiaAgainstBJPLoot" ಹ್ಯಾಷ್ ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, ದೇಶದ ನಾಲ್ಕು ಮಹಾನಗರಗಳಲ್ಲಿ ಕಳೆದ ಜನವರಿಯಿಂದ ಗೃಹಬಳಕೆಯ ಎಲ್‌ಪಿಜಿ ದರ ಹೆಚ್ಚಿಸಿರುವ ಪಟ್ಟಿಯನ್ನೂ ಟ್ಯಾಗ್‌ ಮಾಡಿದ್ದಾರೆ.

‌ಪೆಟ್ರೋಲ್‌, ಡೀಸೆಲ್‌ ಮತ್ತು ಎಲ್‌ಪಿಜಿ ಸಿಲಿಂಡರ್‌ಗಳ ಮೇಲಿನ ದರ ಏರಿಕೆ ಕುರಿತು ಕೇಂದ್ರದ ವಿರುದ್ಧ ಹೋರಾಟ ನಡೆಸುತ್ತಿರುವ ಕಾಂಗ್ರೆಸ್‌ ಪಕ್ಷ, ಇವುಗಳ ಮೇಲಿನ ತೆರಿಗೆಗಳನ್ನು ಕಡಿತಗೊಳಿಸುವಂತೆಯೂ ಒತ್ತಾಯಿಸುತ್ತಾ ಬಂದಿದೆ. ಈಗ ಪುನಃ ಎಲ್‌ಪಿಜಿ ದರ ಏರಿಸಿರುವುದರ ವಿರುದ್ಧ ಧ್ವನಿ ಎತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT