ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್ ಬಿಕ್ಕಟ್ಟಿಗೆ ನೆಹರೂರನ್ನೇ ದೂಷಿಸುತ್ತೀರಾ: ಮೋದಿಗೆ ರಾಹುಲ್‌ ಪ್ರಶ್ನೆ

Last Updated 30 ಏಪ್ರಿಲ್ 2022, 14:33 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ತಲೆದೋರಿರುವ ವಿದ್ಯುತ್ ಬಿಕ್ಕಟ್ಟಿನ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈಗ ದೇಶದಲ್ಲಿ ತಲೆದೋರಿರುವ ವಿದ್ಯುತ್‌ ಬಿಕ್ಕಟ್ಟಿಗೆ ಯಾರನ್ನು ದೂಷಿಸುತ್ತೀರಿ ಎಂದು ಮೋದಿಯನ್ನು ರಾಹುಲ್‌ ಪ್ರಶ್ನಿಸಿದ್ದಾರೆ.

ಈ ಕುರಿತು ಶನಿವಾರ ಟ್ವೀಟ್‌ ಮಾಡಿರುವ ಅವರು, ‘ಪ್ರಧಾನಿಯವರ ಭರವಸೆಗಳು ಮತ್ತು ಉದ್ದೇಶಗಳೊಂದಿಗೆ ನಾವು ಸಂಪರ್ಕ ಸಾಧಿಸಲು ಸಾಧ್ಯವಿಲ್ಲ. ಮೋದಿಯವರೇ, ಈ ವಿದ್ಯುತ್ ಬಿಕ್ಕಟ್ಟಿಗೆ ನಿಮ್ಮ ವೈಫಲ್ಯವೇ ಕಾರಣ. ಈಗ ನೀವು ಯಾರನ್ನು ದೂಷಿಸುವಿರಿ? ನೆಹರೂ ಅವರನ್ನೇ ಅಥವಾ ರಾಜ್ಯಗಳನ್ನೇ ಅಥವಾ ಜನರನ್ನೇ?’ ಎಂದು ರಾಹುಲ್‌ ಕೇಳಿದ್ದಾರೆ.

ಪ್ರಧಾನಿ ಮೋದಿ ಈ ಹಿಂದೆ ಮಾಡಿರುವ ಭಾಷಣದ ವಿಡಿಯೊ ತುಣುಕನ್ನು ರಾಹುಲ್‌ ತಮ್ಮ ಟ್ವೀಟ್‌ ಜೊತೆಗೆ ಹಂಚಿಕೊಂಡಿದ್ದಾರೆ. 24 ಗಂಟೆಗಳ ಕಾಲ ವಿದ್ಯುತ್ ನೀಡುವುದಾಗಿ ಪ್ರಧಾನಿ ಮೋದಿ ಈ ವಿಡಿಯೊದಲ್ಲಿ ಭರವಸೆ ನೀಡಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳು ಕಳೆದ ಆರು ವರ್ಷಗಳಲ್ಲೇ ಅತ್ಯಂತ ಭೀಕರವಾದ ವಿದ್ಯುತ್ ಬಿಕ್ಕಟ್ಟನ್ನು ಎದುರಿಸುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT