ಭಾನುವಾರ, ಮೇ 22, 2022
25 °C

ಮುಂಬೈ ಅಗ್ನಿ ಅವಘಡ ಸಂತ್ರಸ್ತರಿಗೆ ನೆರವಾಗಿ: ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಂಬೈನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಸಂತಾಪ ಸೂಚಿಸಿದ್ದಾರೆ.

ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿರುವ ಅವರು, ಪಕ್ಷದ ಕಾರ್ಯಕರ್ತರು ಸಂತ್ರಸ್ತರಿಗೆ ನೆರವು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

'ಮುಂಬೈನಲ್ಲಿ ಅಗ್ನಿ ದುರಂತದ ಸುದ್ದಿ ಆತಂಕಕಾರಿಯಾಗಿದೆ. ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಅಲ್ಲದೆ, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯ ಸಹಾಯ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ನಾನು ಮನವಿ ಮಾಡುತ್ತೇನೆ' ಎಂದು ರಾಹುಲ್ ಗಾಂಧಿ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 

ಮುಂಬೈನ ತಾರ್ಡಿಯೊ ಪ್ರದೇಶದ ಗೋವಾಲಿಯ ಟ್ಯಾಂಕ್‌ನಲ್ಲಿರುವ ಗಾಂಧಿ ಆಸ್ಪತ್ರೆ ಎದುರಿನ ಕಮಲಾ ಕಟ್ಟಡದ 18ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದು, ಕನಿಷ್ಠ 17 ಜನ ಗಾಯಗೊಂಡಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೊದಲ್ಲಿ ಕಟ್ಟಡದ ಮೇಲ್ಭಾಗದಲ್ಲಿ ದಟ್ಟವಾದ ಹೊಗೆ ಆವರಿಸಿರುವುದನ್ನು ಕಾಣಬಹುದು. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು