ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದು ವಾರದ ಬಳಿಕ ರಾಹುಲ್ ಗಾಂಧಿ ಟ್ವಿಟರ್‌ ಖಾತೆ ಅನ್‌ಲಾಕ್‌

Last Updated 14 ಆಗಸ್ಟ್ 2021, 6:15 IST
ಅಕ್ಷರ ಗಾತ್ರ

ನವದೆಹಲಿ: ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ಗುರುತನ್ನು ಬಹಿರಂಗಪಡಿಸಿದ ಆರೋಪದಡಿ ಲಾಕ್‌ ಮಾಡಲಾಗಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಟ್ವಿಟರ್‌ ಖಾತೆಯನ್ನು ಒಂದು ವಾರದ ಬಳಿಕ, ಶನಿವಾರ ಅನ್‌ಲಾಕ್‌ ಮಾಡಲಾಗಿದೆ.

ಕಳೆದ ವಾರ ದೆಹಲಿ ಅತ್ಯಾಚಾರ ಸಂತ್ರಸ್ತೆಯ ಕುಟುಂಬದೊಂದಿಗಿನ ಫೋಟೊವನ್ನು ರಾಹುಲ್‌ ಗಾಂಧಿ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಖಾತೆಯನ್ನು ಟ್ವಿಟರ್‌ ಲಾಕ್‌ ಮಾಡಿತ್ತು. ಇದಕ್ಕೆ ವಿರೋಧ ಪಕ್ಷದ ಸದಸ್ಯರಿಂದ ಭಾರಿ ಆಕ್ಷೇಪವೂ ವ್ಯಕ್ತವಾಗಿತ್ತು. ಟ್ವಿಟರ್‌ ಪಕ್ಷಪಾತಿಯಾಗಿದೆ ಎಂದೂ ಅವರು ದೂರಿದ್ದರು.

ಇದರ ಬೆನ್ನಲ್ಲೇ ಟ್ವಿಟರ್‌, ರಾಹುಲ್‌ ಗಾಂಧಿ ಅವರ ಖಾತೆಯನ್ನು ಶನಿವಾರ ಅನ್‌ಲಾಕ್‌ ಮಾಡಿದೆ. ಜತೆಗೆ ಸಂತ್ರಸ್ತೆಯ ಕುಟುಂಬದವರ ಫೋಟೊವನ್ನು ಹಂಚಿಕೊಂಡಿದ್ದ ಪಕ್ಷದ ಇತರ ಮುಖಂಡರ ಖಾತೆಯನ್ನು ಕೂಡ ಮರುಸ್ಥಾಪಿಸಲಾಗಿದೆ ಎಂದು ಮೂಲಗಳು ಹೇಳಿವೆ.

‘ದೇಶದ ರಾಜಕಾರಣದಲ್ಲಿ ಟ್ವಿಟರ್‌ ಹಸ್ತಕ್ಷೇಪ ಮಾಡುತ್ತಿದೆ. ನನ್ನ ಟ್ವಿಟರ್‌ ಖಾತೆಯನ್ನು ಲಾಕ್‌ ಮಾಡಿರುವುದು ದೇಶದ ಪ್ರಜಾಸತ್ತಾತ್ಮಕ ರಚನೆಯ ಮೇಲೆ ನಡೆಸಿದ ದಾಳಿ’ ಎಂದು ರಾಹುಲ್‌ ಗಾಂಧಿ ಅವರು ತಮ್ಮ ಯೂಟ್ಯೂಬ್‌ ಚಾನೆಲ್‌ನಲ್ಲಿ ಶುಕ್ರವಾರ ಹರಿಹಾಯ್ದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT