ನವದೆಹಲಿ: ಕೃಷಿ ಮಸೂದೆಗಳನ್ನು ವಿರೋಧಿಸಿ ‘ರೈತರಿಗಾಗಿ ಮಾತನಾಡಿ’ ಎಂಬ ಅಭಿಯಾನವನ್ನು ಕಾಂಗ್ರೆಸ್ ಪಕ್ಷ ಸಾಮಾಜಿಕ ಮಾಧ್ಯಮಗಳಲ್ಲಿ ಶನಿವಾರ ಆರಂಭಿಸಿದೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರನ್ನು ಶೋಷಿಸುತ್ತಿದ್ದು, ಅದರ ವಿರುದ್ಧ ಜನರು ಧ್ವನಿಯೆತ್ತಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

‘ಮೋದಿ ಸರ್ಕಾರದಲ್ಲಿ ರೈತರ ಮೇಲೆ ಆಗುತ್ತಿರುವ ದೌರ್ಜನ್ಯ ಮತ್ತು ಶೋಷಣೆಯ ವಿರುದ್ಧ ಒಂದಾಗಿ ಧ್ವನಿಯೆತ್ತಬೇಕಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ವಿಡಿಯೊ ಕಳುಹಿಸುವ ಮೂಲಕ ‘ರೈತರಿಗಾಗಿ ಮಾತನಾಡಿ’ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದಿರುವ ಅವರು, ಕೃಷಿ ಮಸೂದೆ ಹಿಂಪಡೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಆಗ್ರಹಿಸಿರುವ ವಿಡಿಯೊವನ್ನು ಟ್ಯಾಗ್ ಮಾಡಿದ್ದಾರೆ.

ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳು ಸಂಸತ್ತಿನ ಉಭಯ ಸದನಗಳಲ್ಲಿ ಇತ್ತೀಚೆಗೆ ಅಂಗೀಕಾರ ಪಡೆದಿದ್ದು, ರಾಷ್ಟ್ರಪತಿ ಅವರ ಅಂಕಿತವಷ್ಟೇ ಬಾಕಿಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.