ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ತಾಯಿ ಹೀರಾಬೆನ್ ಅಸ್ವಸ್ಥ: ಶೀಘ್ರ ಗುಣಮುಖರಾಗಿ ಎಂದು ರಾಹುಲ್ ಹಾರೈಕೆ

Last Updated 28 ಡಿಸೆಂಬರ್ 2022, 10:18 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ, ಶತಾಯುಷಿ ಹೀರಾಬೆನ್ ಮೋದಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

‘ತಾಯಿ ಮತ್ತು ಮಗನ ನಡುವಿನ ಪ್ರೀತಿ ಶಾಶ್ವತ ಮತ್ತು ಅಮೂಲ್ಯವಾದುದು. ಮೋದಿ ಜೀ, ಈ ಕಷ್ಟದ ಸಮಯದಲ್ಲಿ ನನ್ನ ಪ್ರೀತಿ ಮತ್ತು ಬೆಂಬಲ ನಿಮ್ಮೊಂದಿಗಿದೆ. ನಿಮ್ಮ ತಾಯಿ ಹೀರಾಬೆನ್ ಮೋದಿ ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಬುಧವಾರ ಬೆಳಗ್ಗೆ ಹೀರಾಬೆನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಗುಜರಾತ್‌ನ ಅನೇಕ ಶಾಸಕರು ಆಸ್ಪತ್ರೆಗೆ ತೆರಳಿ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT