ತಮಿಳುನಾಡಿನಲ್ಲಿ ‘ಜಲ್ಲಿಕಟ್ಟು’ ಕ್ರೀಡೆ ವೀಕ್ಷಿಸಿದ ರಾಹುಲ್ ಗಾಂಧಿ

ಮಧುರೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮಿಳುನಾಡಿನ ಅವನಿಯಪುರಂನಲ್ಲಿ ‘ಜಲ್ಲಿಕಟ್ಟು’ ಕ್ರೀಡೆಯನ್ನು ಗುರುವಾರ ವೀಕ್ಷಿಸಿದರು. ಈ ವೇಳೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ಉಪಸ್ಥಿತರಿದ್ದರು.
ರಾಹುಲ್ ಗಾಂಧಿ ಗುರುವಾರ ಪೊಂಗಲ್ ಹಬ್ಬದ (ಮಕರ ಸಂಕ್ರಾತಿ) ಆಚರಣೆಗಾಗಿ ದೆಹಲಿಯಿಂದ ತಮಿಳುನಾಡಿಗೆ ಬಂದಿದ್ದಾರೆ.
ಪೊಂಗಲ್ ಹಬ್ಬದಂದು ಜಲ್ಲಿಕಟ್ಟು ಕ್ರೀಡೆಯನ್ನು ನಡೆಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೆ.ಸಿ ವೇಣುಗೋಪಾಲ್, ಟಿಎನ್‌ಸಿಸಿ ಮುಖ್ಯಸ್ಥ ಕೆ.ಸಿ ಅಳಗಿರಿ, ಪುದುಚೇರಿ ಮುಖ್ಯಮಂತ್ರಿ ವಿ.ನಾರಯಣಸ್ವಾಮಿ ಅವರು ಭಾಗವಹಿಸಿದ್ದರು.
ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಕೂಡ ಜಲ್ಲಿಕಟ್ಟು ನಡೆಯುವ ಸ್ಥಳದಲ್ಲಿ ಉಪಸ್ಥಿತರಿದ್ದರು. ಆರಂಭದಲ್ಲಿ ಪ್ರತ್ಯೇಕ ವೇದಿಕೆಯಲ್ಲಿದ್ದ ಉಭಯ ನಾಯಕರು, ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.
ಈ ಬಾರಿಯ ತಮಿಳುನಾಡು ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಡಿಎಂಕೆ ಒಟ್ಟಿಗೆ ಎದುರಿಸಲಿವೆ ಎನ್ನಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.