ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ಧಾನದಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ

Last Updated 5 ಡಿಸೆಂಬರ್ 2022, 2:58 IST
ಅಕ್ಷರ ಗಾತ್ರ

ಜಲಾವಾಡ್: ರಾಹುಲ್ ಗಾಂಧಿ ನೇತೃತ್ವದಲ್ಲಿ ಸಾಗುತ್ತಿರುವ ಭಾರತ್ ಜೋಡೊ ಯಾತ್ರೆ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ರಾಜಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ ಮುಂದುವರಿದಿದೆ.

ಮಧ್ಯಪ್ರದೇಶದಿಂದ ರಾಜಸ್ಥಾನಕ್ಕೆ ಭಾನುವಾರ ರಾತ್ರಿ ಪ್ರವೇಶಿಸಿರುವ ಭಾರತ್ ಜೋಡೊ ಯಾತ್ರೆ, ಸೋಮವಾರ ಬೆಳಿಗ್ಗೆ ಜಲಾವಾಡ್‌ನ ಕಾಳಿ ತಲಾಯ್ಪ್ರದೇಶದಿಂದ ಪಾದಯಾತ್ರೆ ಆರಂಭಗೊಂಡಿತು.

ರಾಹುಲ್ ಗಾಂಧಿ ಅವರೊಂದಿಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್, ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್, ಸಚಿವರು ಹಾಗೂ ಶಾಸಕರು ಸೇರಿದಂತೆ ಕಾಂಗ್ರೆಸ್ ನಾಯಕರು ಹೆಜ್ಜೆ ಹಾಕಿದರು.

ರಾಹುಲ್ ಗಾಂಧಿ ಪಾದಯಾತ್ರೆ ಹಿನ್ನೆಲೆಯಲ್ಲಿ ಗರಿಷ್ಠ ಭದ್ರತಾ ಒದಗಿಸಲಾಗಿದೆ. ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಹಿಂಬಾಲಿಸಿದರು.

ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆ 12 ರಾಜ್ಯಗಳಲ್ಲಿ ಒಟ್ಟು 3,750 ಕಿ.ಮೀ. ಕ್ರಮಿಸಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಯಾತ್ರೆ ಮುಕ್ತಾಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT