ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷೆಗೆ ತಡೆ ಸಿಗದಿದ್ದರೆ ರಾಹುಲ್ ತಿಂಗಳೊಳಗೆ ತ್ಯಜಿಸಬೇಕಿದೆ ಅಧಿಕೃತ ಬಂಗಲೆ

Last Updated 24 ಮಾರ್ಚ್ 2023, 13:58 IST
ಅಕ್ಷರ ಗಾತ್ರ

ನವದೆಹಲಿ: ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದಲೂ ಅನರ್ಹಗೊಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಅವರ ಶಿಕ್ಷೆಗೆ ಹೈಕೋರ್ಟ್ ತಡೆ ನೀಡದೇ ಇದ್ದಲ್ಲಿ ದೆಹಲಿಯ ಲುಟೆನ್ಸ್ ಪ್ರದೇಶದಲ್ಲಿರುವ ಅಧಿಕೃತ ಸರ್ಕಾರಿ ಬಂಗಲೆಯನ್ನು ಅವರು ಖಾಲಿ ಮಾಡಬೇಕಿದೆ ಎಂದು ಶುಕ್ರವಾರ ಅಧಿಕಾರಿಗಳು ಹೇಳಿದ್ದಾರೆ.

2004ರ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ರಾಹುಲ್ ಗಾಂಧಿಯವರಿಗೆ ನಂ 12, ತುಘಲಕ್ ರಸ್ತೆಯ ಬಂಗಲೆಯನ್ನು ನೀಡಲಾಗಿತ್ತು.


2019ರಲ್ಲಿ ಮೋದಿ ಉಪನಾಮವನ್ನು ವ್ಯಂಗ್ಯ ಮಾಡಿದ್ದ ಆರೋಪ ಮೇಲೆ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ನಿನ್ನೆ ಸೂರತ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ, ಶುಕ್ರವಾರ ಲೋಕಸಭೆ ಸಚಿವಾಲಯವು ರಾಹುಲ್ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಅಧಿಸೂಚನೆ ಹೊರಡಿಸಿದೆ.

‘ರಾಹುಲ್ ಗಾಂಧಿಯವರು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ನಿವಾಸದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ನಿಯಮಗಳ ಪ್ರಕಾರ, ಅವರು ಅನರ್ಹತೆ ಆದೇಶ ಹೊರಬಿದ್ದ ದಿನದಿಂದ ಒಂದು ತಿಂಗಳ ಒಳಗೆ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಬೇಕು’ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT