ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಹಿಂಸಾಚಾರ: ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ವಾಗ್ದಾಳಿ

Last Updated 10 ಜುಲೈ 2021, 8:33 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಸ್ಥಳೀಯ ಚುನಾವಣೆಗೆ ನಾಮಪತ್ರಸಲ್ಲಿಸುವ ವೇಳೆ ಮಹಿಳೆಯೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿರುವ ಪ್ರಕರಣವನ್ನು ಖಂಡಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ರಾಜ್ಯದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಹಿಂಸಾಚಾರವನ್ನು ‘ಮಾಸ್ಟರ್‌ ಸ್ಟ್ರೋಕ್‌‘ ಎಂದು ಮರುನಾಮಕರಣ ಮಾಡಿದೆ ಎಂದು ದೂರಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ‘ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹಿಳೆ ನಾಮಪತ್ರ ಸಲ್ಲಿಸುವುದನ್ನು ತಡೆಯಲು ಬಿಜೆಪಿ ತನ್ನ ಎಲ್ಲ ಮಿತಿಯನ್ನೂ ದಾಟುತ್ತಿದೆ‘ ಎಂದು ಆರೋಪಿಸಿದ್ದಾರೆ.

ಕೆಲವು ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯೊಬ್ಬರು, ಬಿಜೆಪಿ ಶಾಸಕರು ತನ್ನನ್ನು ಹಾಗೂ ತನ್ನ ಕುಟುಂಬವನ್ನು ಕೊಲ್ಲಲು ಪ್ರಯತ್ನಿಸಿದ್ದರು ಎಂದು ಆರೋಪಿಸಿದ್ದರು. ಈಗ ಅದೇ ಬಿಜೆಪಿಯವರು, ಇಂದು ಚುನಾವಣೆಯಲ್ಲಿ ಮಹಿಳೆ ನಾಮಪತ್ರ ಸಲ್ಲಿಸುವುದನ್ನು ತಡೆಯಲು ಎಲ್ಲ ಮಿತಿಗಳನ್ನು ಮೀರುತ್ತಿದ್ದಾರೆ. ಅದೇ ಪಕ್ಷದ ಸರ್ಕಾರ, ಅದೇ ರೀತಿಯ ವರ್ತನೆ‘ ಎಂದು ಪ್ರಿಯಾಂಕಾ ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ. ತಮ್ಮ ಟ್ವೀಟ್‌ ಜತೆಗೆ ನಾಮಪತ್ರ ಸಲ್ಲಿಸುವ ವೇಳೆ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೊ ತುಣಕನ್ನೂ ಪೋಸ್ಟ್‌ ಮಾಡಿದ್ದಾರೆ.

ರಾಜಕೀಯ ಪಕ್ಷದ ಇಬ್ಬರು ಪುರುಷರು ಸ್ಥಳೀಯ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲು ಹೋಗುತ್ತಿದ್ದ ಮಹಿಳೆಯ ಸೀರೆಯನ್ನು ಎಳೆದಿರುವ ಘಟನೆ ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದಿತ್ತು. ಘಟನೆಯ ಬಗ್ಗೆ ಕ್ಷಮೆ ಕೇಳಬೇಕೆಂದು ಬಿಜೆಪಿ ನೇತೃತ್ವದ ಸರ್ಕಾರವನ್ನು ಕಾಂಗ್ರೆಸ್‌ ಒತ್ತಾಯಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT