ಮಂಗಳವಾರ, ಜೂನ್ 15, 2021
27 °C
ಕೇಂದ್ರ ಸರ್ಕಾರದ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಸುಳ್ಳು ಸುದ್ದಿ ಹರಡುತ್ತಾ ನಿರುದ್ಯೋಗ ಮುಚ್ಚಿಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಲಾಕ್‌ಡೌನ್‌ನಿಂದಾಗಿ ದೇಶದಾದ್ಯಂತ ಕಳೆದ ನಾಲ್ಕು ತಿಂಗಳಲ್ಲಿ 2 ಕೋಟಿ ಮಂದಿ ಉದ್ಯೋಗ ಕಳೆದುಕೊಂಡಿದ್ದು, ಇನ್ನೂ ಎರಡು ಕೋಟಿ ಕುಟುಂಬಗಳ ಭವಿಷ್ಯ ಕತ್ತಲಲ್ಲಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ದೇಶದಲ್ಲಿರುವ ನಿರುದ್ಯೋಗ ಸಮಸ್ಯೆಯನ್ನು ಯಾವುದೇ ಕಾರಣಕ್ಕೂ ಮುಚ್ಚಿಡಲು ಸಾಧ್ಯವಿಲ್ಲ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.

ಏಪ್ರಿಲ್‌ ನಂತರ ದೇಶದಲ್ಲಿ 1.89 ಕೋಟಿ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ ಎಂಬ ಮಾಧ್ಯಮ ವರದಿಯನ್ನು ಉಲ್ಲೇಖಿಸಿ, ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್‌ ಗಾಂಧಿ, ’ಫೇಸ್‌ಬುಕ್‌ನಲ್ಲಿ ದ್ವೇಷ ಮತ್ತು ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ದೇಶದಲ್ಲಿರುವ ನಿರುದ್ಯೋಗ ಸಮಸ್ಯೆಯನ್ನು ಮುಚ್ಚಿಡಲು ಸಾಧ್ಯವಿಲ್ಲ’ ಎಂದು ಕೇಂದ್ರ ಸರ್ಕಾರದ ವಿರುದ್ಧ ಅವರು ಕಿಡಿಕಾರಿದ್ದಾರೆ.

ಕಳೆದ ವಾರ ಅಮೆರಿಕದ ವಾಲ್‌ಸ್ಟ್ರೀನ್ ಜರ್ನಲ್‌ನಲ್ಲಿ ’ಫೇಸ್‌ಬುಕ್ ಇಂಡಿಯಾ ಕುರಿತು’ ಕುರಿತು ಪ್ರಕಟವಾದ ವರದಿಯನ್ನು ಉಲ್ಲೇಖಿಸಿ, ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು