ಶನಿವಾರ, ಸೆಪ್ಟೆಂಬರ್ 18, 2021
22 °C

ರಾಯಗಡ ಭೂಕುಸಿತ: ಮಹಾರಾಷ್ಟ್ರ, ಕೇಂದ್ರದಿಂದ ಮೃತರ ಕುಟುಂಬಕ್ಕೆ ₹ 7 ಲಕ್ಷ ಪರಿಹಾರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮಹಾರಾಷ್ಟ್ರದ ಕರಾವಳಿ ಪ್ರದೇಶ ರಾಯಗಡ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಹಾರಾಷ್ಟ್ರ ಸರ್ಕಾರ ತಲಾ ₹ 5 ಲಕ್ಷ ಪರಿಹಾರ ಘೋಷಿಸಿದೆ. ಜೊತೆಗೆ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲು ಸರ್ಕಾರ ಆದೇಶಿಸಿದೆ.

ಈ ಮಧ್ಯೆ, ಕೇಂದ್ರ ಸರ್ಕಾರವೂ ಮೃತರ ಕುಟುಂಬಸ್ಥರಿಗೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದೆ. ಪರಿಹಾರ ಘೋಷಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ಭಾರಿ ಮಳೆಯಿಂದಾಗಿ ಮಹಾರಾಷ್ಟ್ರದ ಪ್ರವಾಹದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದ್ದು, ಸಂತ್ರಸ್ತರಿಗೆ ನೆರವು ನೀಡಲಾಗುತ್ತಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಮಹಾರಾಷ್ಟ್ರದ ಕರಾವಳಿ ರಾಯಗಡ ಜಿಲ್ಲೆಯ ಹಳ್ಳಿಯೊಂದರ ಸಮೀಪ ಸಂಭವಿಸಿದ ಭೂಕುಸಿತದಲ್ಲಿ 36 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮಹಾದ್ ತಹಸಿಲ್‌ನ ತಲೈ ಗ್ರಾಮದ ಬಳಿ ಗುರುವಾರ ಸಂಜೆ ಈ ಘಟನೆ ನಡೆದಿದೆ.

‘ಮಹಾರಾಷ್ಟ್ರದ ರಾಯಗಡದಲ್ಲಿ ಸಂಭವಿಸಿದ ಭೂಕುಸಿತದಿಂದ ಆದ ಪ್ರಾಣಹಾನಿ. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ. ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಪ್ರವಾಹ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಮತ್ತು ನೆರವು ನೀಡಲಾಗುತ್ತಿದೆ.’ ಎಂದು ಪ್ರಧಾನಿ ಹೇಳಿದ್ದಾರೆ.

ಗಾಯಾಳುಗಳಿಗೆ ₹ 50,000 ನೀಡಲಾಗುವುದು ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸಹ ಮೃತರಿಗೆ ಸಂತಾಪ ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.