ಭಾನುವಾರ, ಮೇ 22, 2022
21 °C
ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ರೈತ ಸಂಘಟನೆಗಳ ಒತ್ತಾಯ

ರೈಲು ತಡೆದು ಪ್ರತಿಭಟನೆ; ದೆಹಲಿಯಾದ್ಯಂತ ಕಟ್ಟೆಚ್ಚರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್‌ ಮೋರ್ಚಾ (ಎಸ್‌ಕೆಎಂ) ಗುರುವಾರ ದೇಶದಾದ್ಯಂತ ರೈಲು ತಡೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು, ರಾಷ್ಟ್ರ ರಾಜಧಾನಿಯ ವಿವಿಧ ಭಾಗಳಲ್ಲಿರುವ ರೈಲ್ವೆ ಹಳಿಗಳ ಬಳಿ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.

ರೈಲು ನಿಲ್ದಾಣ ಮತ್ತು ರೈಲು ಹಳಿಗಳು ಹಾದು ಹೋಗಿರುವ ಪ್ರದೇಶಗಳಲ್ಲಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ರೈಲ್ ತಡೆ’ ಕರೆಯ ಹಿನ್ನೆಲೆಯಲ್ಲಿ ರೈಲ್ವೆ ಸಂರಕ್ಷಣಾ ವಿಶೇಷ ಪಡೆಯ 20ಕ್ಕೂ ಹೆಚ್ಚು ತುಕಡಿಗಳನ್ನು ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳಗಳಲ್ಲಿ ನಿಯೋಜಿಸಲಾಗಿದೆ.

ಜನವರಿ 26ರ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ‘ಟ್ರ್ಯಾಕ್ಟರ್‌ ಪೆರೇಡ್‌‘ಗೆ ಎಸ್‌ಕೆಎಂ ಕರೆ ನೀಡಿತ್ತು. ಆ ವೇಳೆ ಪ್ರತಿಭಟನಾಕಾರರ ಒಂದು ಗುಂಪು ಪೊಲೀಸರೊಂದಿಗೆ ಘರ್ಷಣೆಗಿಳಿದು, ವಾಹನಗಳನ್ನು ಧ್ವಂಸಗೊಳಿಸಿ, ಕೆಂಪುಕೋಟೆ ಬಳಿ ಧಾರ್ಮಿಕ ಧ್ವಜನವನ್ನು ಹಾರಿಸಿತ್ತು. ನಂತರ ಎಸ್‌ಕೆಎಂ ಫೆ.6 ರಂದು ದೇಶದಾದ್ಯಂತ ‘ಚಕ್ಕಾ ಜಾಮ್‌‘ ಚಳವಳಿಗೆ ಕರೆ ನೀಡಿತ್ತು. ಈಗ ಅದರ ಮುಂದುವರಿದ ಭಾಗವಾಗಿ ‘ರೈಲು ತಡೆ‘ ಚಳವಳಿ ನಡೆಸುತ್ತಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು