ಭಾನುವಾರ, ಫೆಬ್ರವರಿ 28, 2021
21 °C
ಲಂಚ ಪಡೆದ ಆರೋಪ: ರೈಲ್ವೆ ಅಧಿಕಾರಿ ಬಂಧನ ಪ್ರಕರಣ

ಹೋಟೆಲ್‌ನಲ್ಲಿ ಬಚ್ಚಿಟ್ಟಿದ್ದ ₹ 2 ಕೋಟಿ ಜಪ್ತಿ ಮಾಡಿದ ಸಿಬಿಐ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಲಂಚ ಪಡೆದ ಆರೋಪದಡಿ ರೈಲ್ವೆ ಅಧಿಕಾರಿಯೊಬ್ಬರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಕಾರ್ಯಾಚರಣೆ ನಡೆಸಿದ ಸಿಬಿಐ ಅಧಿಕಾರಿಗಳು ದಕ್ಷಿಣ ದೆಹಲಿಯ ಹೋಟೆಲ್‌ವೊಂದರಲ್ಲಿ ಬಚ್ಚಿಟ್ಟಿದ್ದ ₹ 2.04 ಕೋಟಿ ಜಪ್ತಿ ಮಾಡಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿಗಳಾಗಿರುವ ಎಬಿಸಿಐ ಇನ್‌ಫ್ರಾಸ್ಟ್ರಕ್ಚರ್‌ ಪ್ರೈ.ಲಿ.ನ ಸಿಬ್ಬಂದಿ ಈ ಹಣವನ್ನು ಬಚ್ಚಿಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೆ ₹ 4.43 ಕೋಟಿ ಜಪ್ತಿ ಮಾಡಿದಂತಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

₹ 1 ಕೋಟಿ ಲಂಚ ಪಡೆದ ಆರೋಪದ ಮೇಲೆ, ಈಶಾನ್ಯ ಗಡಿ ರೈಲ್ವೆಯ (ಎನ್‌ಎಫ್‌ಆರ್‌) ಮುಖ್ಯ ಆಡಳಿತಾಧಿಕಾರಿ ಮಹೇಂದರ್‌ ಸಿಂಗ್‌ ಚೌಹಾಣ್‌ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ಬಂಧಿಸಿದ್ದರು.

‘₹ 2.04 ಕೋಟಿ ನಗದು ಜೊತೆಗೆ ಹಲವಾರು ವಸ್ತುಗಳನ್ನು ಸಹ ದಾಳಿ ವೇಳೆ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆಯೂ ತನಿಖೆ ನಡೆಸಲಾಗುವುದು’ ಎಂದು ಸಿಬಿಐ ವಕ್ತಾರ ಆರ್‌.ಸಿ.ಜೋಶಿ ತಿಳಿಸಿದರು.

ದೆಹಲಿ, ಅಸ್ಸಾಂ, ಉತ್ತರಾಖಂಡ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ 20 ಪ್ರದೇಶಗಳಲ್ಲಿ ಈ ಮೊದಲು ಸಿಬಿಐ ಶೋಧ ಕಾರ್ಯ ನಡೆಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು