ಪುಲ್ವಾಮದಲ್ಲಿ ಉಗ್ರ ದಾಳಿಗೆ ಆರ್‌ಪಿಎಫ್ ಸಿಬ್ಬಂದಿ ಹುತಾತ್ಮ
ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಸೋಮವಾರ ನಡೆದ ಉಗ್ರ ದಾಳಿಯಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ. ಮತ್ತೊಬ್ಬರು ಗಾಯಗೊಂಡಿದ್ದಾರೆ.
ಪುಲ್ವಾಮದ ಕಕಪೊರಾದಲ್ಲಿ ಉಗ್ರರು ಆರ್‌ಪಿಎಫ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಆರ್‌ಪಿಎಫ್ ಸಿಬ್ಬಂದಿ ಸುರೇಂದರ್ ಸಿಂಗ್ ಹಾಗೂ ಎಎಸ್‌ಐ ದೇವರಾಜ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಸಿಂಗ್ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು.
ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಗಳು ಮತ್ತು ನಾಗರಿಕರ ಮೇಲೆ ಕಳೆದ ಮೂರು ವಾರಗಳಿಂದ ಉಗ್ರ ದಾಳಿಗಳು ನಡೆಯುತ್ತಿವೆ. ಇದು ಈ ತಿಂಗಳಲ್ಲಿ ನಡೆದ 9ನೇ ದಾಳಿಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.