ಅಂಚೆ ಕಚೇರಿಯಲ್ಲೇ ರೈಲ್ವೆ ಟಿಕೆಟ್ ಬುಕ್ಕಿಂಗ್

ನವದೆಹಲಿ: ರೈಲ್ವೆ ಪ್ರಯಾಣಿಕರು ಇನ್ನು ಮುಂದೆ ತಮ್ಮ ಹತ್ತಿರದ ಅಂಚೆ ಕಚೇರಿಗಳಲ್ಲೇ ರೈಲ್ವೆ ಟಿಕೆಟ್ ಕಾಯ್ದಿರಿಸಬಹುದಾಗಿದೆ. ರೈಲು ಪ್ರಯಾಣಿಕರಿಗೆ ತಮ್ಮ ಹತ್ತಿರದಲ್ಲೇ ಟಿಕೆಟ್ ಕಾಯ್ದಿರಿಸಲು ಸಾಧ್ಯವಾಗಿಸುವ ನಿಟ್ಟಿನಲ್ಲಿ ದೇಶದಾದ್ಯಂತ 45,000 ಅಂಚೆ ಕಚೇರಿಗಳಲ್ಲಿ ರೈಲ್ವೆ ಟಿಕೆಟ್ ಸೌಲಭ್ಯವನ್ನು ಆರಂಭಿಸಲಾಗಿದೆ.
ಈ ಬಗ್ಗೆ ಸೋಮವಾರ ಮಾತನಾಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, 'ದೇಶದಾದ್ಯಂತ ಒಟ್ಟಾರೆ 1.50 ಲಕ್ಷಕ್ಕೂ ಹೆಚ್ಚು ಅಂಚೆ ಕಚೇರಿಗಳಿವೆ. ಈ ಪೈಕಿ 45 ಸಾವಿರ ಅಂಚೆ ಕಚೇರಿಗಳಲ್ಲಿ ರೈಲ್ವೆ ಟಿಕೆಟ್‌ಗಳನ್ನು ಪಡೆಯಬಹುದು. ರೈಲ್ವೆ ನಿಲ್ದಾಣಗಳಲ್ಲಿ ಗ್ರಾಹಕರ ದಟ್ಟಣೆ ಕಡಿಮೆ ಮಾಡಲು ಇದು ಸಹಕಾರಿಯಾಗಲಿದೆ' ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.