ಇ-ಕೇಟರಿಂಗ್ ಸೇವೆಗೆ ರೈಲ್ವೆ ಅನುಮತಿ

ನವದೆಹಲಿ: ರೈಲುಗಳಲ್ಲಿ ಇ-ಕೇಟರಿಂಗ್ ಸೇವೆಗಳನ್ನು ಪುನರಾರಂಭಿಸಲು ಭಾರತೀಯ ರೈಲ್ವೆ ಅನುಮತಿ ನೀಡಿದೆ.
‘ಕೇಂದ್ರ ಮತ್ತು ರಾಜ್ಯ ಸರ್ಕಾರ ಹೊರಡಿಸಿರುವ ಆರೋಗ್ಯ ಮತ್ತು ಸುರಕ್ಷತಾ ಮಾರ್ಗಸೂಚಿಗಳ ಅನುಸಾರವಾಗಿಯೇ ಇ–ಕೇಟರಿಂಗ್ ಸೇವೆ ಒದಗಿಸಲಾಗುವುದು’ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.
ಆಯ್ದ ರೈಲ್ವೆ ನಿಲ್ದಾಣಗಳಲ್ಲಿ ಇ– ಕೇಟರಿಂಗ್ ಪುನರಾರಂಭಿಸಲು ಅನುಮತಿ ನೀಡುವಂತೆ ಈ ಹಿಂದೆ ಐಆರ್‌ಸಿಟಿಸಿ, ರೈಲ್ವೆ ಮಂಡಳಿಗೆ ಪತ್ರ ಬರೆದಿತ್ತು.
ಕೋವಿಡ್–19 ನಿಯಂತ್ರಣಕ್ಕಾಗಿ ರೈಲ್ವೆ ಇ–ಕೇಟರಿಂಗ್ ಸೇವೆಯನ್ನು ಸ್ಥಗಿತಗೊಳಿಸಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.