ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ಇಲಾಖೆ: ಗುಜರಿ ಮಾರಾಟದಿಂದ ₹ 2,582 ಕೋಟಿ ಆದಾಯ

Last Updated 18 ಅಕ್ಟೋಬರ್ 2022, 11:16 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಮೊದಲ 6 ತಿಂಗಳಲ್ಲಿ ಗುಜರಿ (ಸ್ಕ್ರಾಪ್‌) ಮಾರಾಟದಿಂದ ₹ 2,582 ಕೋಟಿ ಆದಾಯ ಗಳಿಸಲಾಗಿದೆ ಎಂದುಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ.

2021ನೇ ವರ್ಷಕ್ಕೆ ಹೋಲಿಸಿದರೆ ಶೇ.28ರಷ್ಟು ಹೆಚ್ಚಳವಾಗಿದೆ. ಕಳೆದ ವರ್ಷ ₹ 2003 ಕೋಟಿ ಸಂಗ್ರಹವಾಗಿತ್ತು ಎಂದು ರೈಲ್ವೆ ಇಲಾಖೆ ಹೇಳಿದೆ.

ಗುಜರಿ ವಸ್ತುಗಳನ್ನು ಇ-ಹರಾಜಿನಲ್ಲಿ ಮಾರಾಟ ಮಾಡುವ ಮೂಲಕ ಪಾರದರ್ಶಕವಾಗಿ ವಹಿವಾಟು ನಡೆಸಲಾಗಿದೆ ಎಂದುರೈಲ್ವೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

2022-23ನೇ ಸಾಲಿಗೆ ಗುಜರಿ ವಸ್ತುಗಳ ಮಾರಾಟದಿಂದ ₹4,400 ಕೋಟಿ ಸಂಗ್ರಹಿಸುವ ಗುರಿಯನ್ನು ರೈಲ್ವೆ ಇಲಾಖೆ ಹೊಂದಿದೆ.

ಕಳೆದ ವರ್ಷ 3,60,732 ಮೆಟ್ರಿಕ್ ಟನ್‌ ಮಾರಾಟ ಮಾಡಲಾಗಿತ್ತು. ಈ ವರ್ಷ ಮೊದಲ 6 ತಿಂಗಳಲ್ಲಿ 3,93,421 ಮೆಟ್ರಿಕ್ ಟನ್ ಗುಜರಿಯನ್ನು ವಿಲೇವಾರಿ ಮಾಡಲಾಗಿದೆ.

1751 ವ್ಯಾಗನ್‌ಗಳು, 1421 ಕೋಚ್‌ಗಳು ಮತ್ತು 97 ಎಂಜಿನ್‌ಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT