ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ವರ್ಷದಿಂದಲೇ ಪೂರ್ಣಪ್ರಮಾಣದಲ್ಲಿ ರೈಲು ಸೇವೆ: ರೈಲ್ವೆ ಸಚಿವಾಲಯ

Last Updated 21 ನವೆಂಬರ್ 2020, 15:38 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ಪ್ರಕರಣಗಳ ಸಂಖ್ಯೆಹೆಚ್ಚುತ್ತಿರುವಕಾರಣ,ಮುಂದಿನವರ್ಷದಪ್ರಾರಂಭದಲ್ಲಿಯೇರೈಲುಗಳ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಲು ರೈಲ್ವೆ ಸಚಿವಾಲಯ ಯೋಚಿಸುತ್ತಿದೆ.

ಪ್ರಸ್ತುತ 736 ವಿಶೇಷ ರೈಲುಗಳು, ಕೋಲ್ಕತ್ತದಲ್ಲಿ ಮೆಟ್ರೊ ರೈಲುಗಳು, ಮುಂಬೈನಲ್ಲಿ ಲೋಕಲ್‌ ರೈಲುಗಳು ಸಂಚರಿಸುತ್ತಿವೆ ಮತ್ತು 20 ವಿಶೇಷ ಕ್ಲೋನ್‌ ರೈಲುಗಳು (ಒಂದೇ ಮಾದರಿಯ) ಕಾರ್ಯ ನಿರ್ವಹಿಸುತ್ತಿವೆ. ಹಬ್ಬಗಳ ಸಂದರ್ಭದಲ್ಲಿ (ಅಕ್ಟೋಬರ್‌ 20ರಿಂದ ನವೆಂಬರ್‌ 30 ರವರೆಗೆ) 436 ವಿಶೇಷ ರೈಲುಗಳು ಸಂಚರಿಸಿವೆ.

ಕೋವಿಡ್‌–19 ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ತಿಂಗಳು, ಸರ್ಕಾರ ಮತ್ತು ರೈಲ್ವೆ ಸಚಿವಾಲಯ ರೈಲು ಸಂಖ್ಯೆಯನ್ನು ಹೆಚ್ಚಿಸುವ ಕುರಿತು ನಿರ್ಣಯ ತೆಗೆದುಕೊಳ್ಳಲಿದೆ. ಹಬ್ಬದ ಸಂದರ್ಭದಲ್ಲಿ ಒದಗಿಸುವ ವಿಶೇಷ ರೈಲು ಸೇವೆಯನ್ನು ಮುಂದುವರಿಸುವ ಕುರಿತು ಶೀಘ್ರವೇ ನಿರ್ಧರಿಸಲಾಗುವುದು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಮಾರ್ಚ್‌ 24ರಂದು ಲಾಕ್‌ಡೌನ್‌ ಘೋಷಣೆಯಾದ ನಂತರ ಎಲ್ಲ ಪ್ರಯಾಣಿಕ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ವಿಶೇಷ ರೈಲು ಸಂಚಾರದಿಂದ ರೈಲ್ವೆ ಈವರೆಗೆ ₹3,322 ಕೋಟಿ ಆದಾಯ ಗಳಿಸಿದೆ. ಇದು ಕಳೆದ ವರ್ಷ ಇದೇ ಅವಧಿಯಲ್ಲಿ ಗಳಿಸಿದ ಆದಾಯಕ್ಕಿಂತ ಶೇ 90ರಷ್ಟು ಕಡಿಮೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT