ಶನಿವಾರ, ಸೆಪ್ಟೆಂಬರ್ 19, 2020
22 °C

ಪ್ಯಾಸೆಂಜರ್ ರೈಲು ಸೇವೆ ಅನಿರ್ದಿಷ್ಟಾವಧಿವರೆಗೆ ಸ್ಥಗಿತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮುಂದಿನ ಆದೇಶದವರೆಗೂ ಎಲ್ಲ ಸಾಮಾನ್ಯ ಪ್ಯಾಸೆಂಜರ್‌ ರೈಲು ಸೇವೆ ಹಾಗೂ ಉಪನಗರ ರೈಲು ಸೇವೆಗಳನ್ನು ಸ್ಥಗಿತಗೊಳಿಸಿರುವುದಾಗಿ ರೈಲ್ವೆ ಇಲಾಖೆ ಮಂಗಳವಾರ ಮಾಹಿತಿ ನೀಡಿದ್ದು, 230 ವಿಶೇಷ ರೈಲುಗಳ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿಸಿದೆ.

‘ರಾಜ್ಯ ಸರ್ಕಾರದ ಮನವಿ ಮೇರೆಗೆ ಮುಂಬೈನಲ್ಲಿ ಕೆಲ ಉಪನಗರ ರೈಲುಗಳ ಕಾರ್ಯಾಚರಣೆ ನಡೆಯುತ್ತಿದೆ. ಇದು ಮುಂದುವರಿಯಲಿದೆ’ ಎಂದು ಇಲಾಖೆ ತಿಳಿಸಿದೆ. ಈ ಹಿಂದಿನ ಆದೇಶದಲ್ಲಿ ಆಗಸ್ಟ್‌ 12ರವರೆಗೂ ರೈಲು ಸೇವೆ ಸ್ಥಗಿತಗೊಳಿಸಿರುವುದಾಗಿ ಇಲಾಖೆ ಘೋಷಿಸಿತ್ತು. ಇದರಿಂದಾಗಿ ಇಲಾಖೆಗೆ ಒಟ್ಟು ₹40 ಸಾವಿರ ಕೋಟಿ ಆದಾಯ ಖೋತಾ ಆಗಲಿದೆ ಎಂದು ಊಹಿಸಲಾಗಿದೆ.    

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು