ಮಂಗಳವಾರ, ಅಕ್ಟೋಬರ್ 27, 2020
22 °C
ಅ. 15ರಿಂದ ಕೆಲವು ರೈಲುಗಳ ಸಂಚಾರ ಆರಂಭ

ಹಬ್ಬಕ್ಕೆ ರೈಲ್ವೆಯಿಂದ ಹೆಚ್ಚುವರಿ ವಿಶೇಷ ರೈಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಲಿರುವ ಕಾರಣ, ರೈಲ್ವೆಯು ಹೆಚ್ಚುವರಿಯಾಗಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಅ. 15ರಿಂದ ಜನ ಶತಾಬ್ದಿ, ತುರಂತ್, ರಾಜಧಾನಿ ಹಾಗೂ ಎಸಿ ಎಕ್ಸ್‌ಪ್ರೆಸ್‌ ಸೇರಿದಂತೆ 40 ರೈಲುಗಳನ್ನು ಓಡಿಸಲಾಗುವುದು ಎಂದು ಉತ್ತರ ರೈಲ್ವೆ ಘೋಷಿಸಿದೆ.

ವಿವಿಧ ವಿಭಾಗಗಳಿಂದ ಅ.16ರಿಂದ ನ.30ರ ವರೆಗೆ 39 ವಿಶೇಷ ರೈಲುಗಳ ಸಂಚಾರಕ್ಕೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ ಎಂದು ಮೂಲಗಳು ಹೇಳಿವೆ.

ಲಖನೌ–ನವದೆಹಲಿ ಮತ್ತು ಅಹಮದಾಬಾದ್‌– ಮುಂಬೈ ನಡುವೆ ತೇಜಸ್‌ ಎಕ್ಸ್‌ಪ್ರೆಸ್‌ಗಳ ಸಂಚಾರವನ್ನು ನಿರ್ವಹಿಸುತ್ತಿರುವ ಐಆರ್‌ಸಿಟಿಸಿ, ಅ. 17ರಿಂದ ಈ ರೈಲುಗಳ ಸಂಚಾರವನ್ನು ಪುನರಾರಂಭಿಸಲಾಗುವುದು ಎಂದು ಹೇಳಿದೆ.

‘ವಿಶೇಷ ರೈಲುಗಳು ಅ. 16ರಿಂದ ನ. 30ರವರೆಗೆ 200 ವಿಶೇಷ ರೈಲುಗಳನ್ನು ಓಡಿಸಲಾಗುವುದು’ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ವಿ.ಕೆ.ಯಾದವ್‌ ಕೆಲ ದಿನಗಳ ಹಿಂದೆಯಷ್ಟೇ ಹೇಳಿದ್ದರು.

ದೇಶದಲ್ಲಿ ಕೋವಿಡ್‌ ಪ್ರಸರಣವನ್ನು ತಡೆಗಟ್ಟುವ ಸಂಬಂಧ ಎಲ್ಲ ಪ್ರಯಾಣಿಕ ರೈಲುಗಳ ಸಂಚಾರವನ್ನು ಮಾರ್ಚ್‌ 22ರಿಂದ ರೈಲ್ವೆ ರದ್ದು ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು