ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನದಲ್ಲಿ ಆಲಿಕಲ್ಲು ಸಹಿತ ಮಳೆ: ಜನ ಜೀವನ ಅಸ್ತವ್ಯಸ್ತ

Last Updated 30 ಜನವರಿ 2023, 10:02 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನದಲ್ಲಿ ಬಹುತೇಕ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಹೀಗಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉದಯಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಇದರಿಂದ ಹಲವೆಡೆ ರೈತರು ಬೆಳೆದ ಬೆಳೆಗಳು ನಾಶವಾಗಿವೆ. ಈ ಕುರಿತು ಇಂದು ಮಧ್ಯಾಹ್ನ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಪರಿಸ್ಥಿತಿ ಕುರಿತು ಚರ್ಚಿಸಲಿದೆ.

‘ರಾಜ್ಯದ ಪೂರ್ವ ಮತ್ತು ಪಶ್ಚಿಮ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ’ ಎಂದು ಇಲಾಖೆ ತಿಳಿಸಿದೆ.

ಕರೇಡಾ ಮತ್ತು ಪರ್ಬತ್ಸರ್ 78 ಸೆಂ.ಮೀ.ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಳೆ ದಾಖಲಾಗಿದೆ. ಜೈಪುರದಲ್ಲಿ 24.9 ಸೇರಿದಂತೆ ಇತರ ಪ್ರದೇಶಗಳಲ್ಲಿ 8 ಸೆಂಮೀಗಿಂತ ಕಡಿಮೆ ಮಳೆಯಾಗಿದೆ. ಜೋಧಪುರದ ಫಲೋಡಿಯಲ್ಲಿ ಕನಿಷ್ಠ ತಾಪಮಾನ 5.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಇನ್ನೂಳಿದಂತೆ ಸಿರೋಹಿ 8.1 ಡಿಗ್ರಿ ಸೆಲ್ಸಿಯಸ್ ಮತ್ತು ಉದಯಪುರ 14.6 ಡಿಗ್ರಿ ದಾಖಲಾಗಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT