ಮಂಗಳವಾರ, ಮಾರ್ಚ್ 28, 2023
22 °C

ಕೇರಳ: ಅಕ್ಟೋಬರ್‌ನಲ್ಲಿ 120 ವರ್ಷಗಳಲ್ಲಿಯೇ ಅತ್ಯಧಿಕ ಮಳೆ!

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರ: ಕೇರಳದಲ್ಲಿ 2021ರ ಅಕ್ಟೋಬರ್‌ನಲ್ಲಿ ಅತ್ಯಧಿಕ ಮಳೆ ದಾಖಲಾಗಿದೆ. ಇದು 120 ವರ್ಷಗಳಲ್ಲಿಯೇ ಅತ್ಯಧಿಕ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಐಎಂಡಿ ಪ್ರಕಾರ ಈ ವರ್ಷದ ಅಕ್ಟೋಬರ್‌ನಲ್ಲಿ 589.9 ಮಿ.ಮೀ ಮಳೆಯಾಗಿದೆ. ಇದು 1901ರ ನಂತರ ಸುರಿದಿರುವ ಅತ್ಯಧಿಕ ಮಳೆಯಾಗಿದೆ. ಅಲ್ಲದೆ ರಾಜ್ಯದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುರಿದ ಮಳೆಗಿಂತ ಎರಡು ಪಟ್ಟು ಹೆಚ್ಚು ಮಳೆ ಈ ವರ್ಷದ ಅಕ್ಟೋಬರ್‌ನಲ್ಲಿ ಸುರಿದಿದೆ.

ರಾಜ್ಯದಲ್ಲಿ ಅಕ್ಟೋಬರ್ ತಿಂಗಳಲ್ಲಿ ಸುರಿದ ಮಳೆಯ ಈ ಹಿಂದಿನ ದಾಖಲೆಗಳ ಪ್ರಕಾರ, 1932ರಲ್ಲಿ 543.2 ಮಿ.ಮೀ, 1999ರಲ್ಲಿ  567.9 ಮಿ.ಮೀ ಮತ್ತು 2002ರಲ್ಲಿ 511.7 ಮಿ.ಮೀ ಮಳೆ ಸುರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು