ಬುಧವಾರ, ಡಿಸೆಂಬರ್ 7, 2022
22 °C

Rain Prediction | ತಮಿಳುನಾಡಿನಲ್ಲಿ ಇನ್ನೆರಡು ದಿನ ಮಳೆ: ಹವಾಮಾನ ಇಲಾಖೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚೆನ್ನೈ: ತಮಿಳುನಾಡಿನ ಹಲವು ಭಾಗಗಳಲ್ಲಿ ಶುಕ್ರವಾರ ವ್ಯಾಪಕ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ತಮಿಳುನಾಡು ಮತ್ತು ಪುದುಚೇರಿಯಲ್ಲಿ ನ.13ರ ವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ  (ಐಎಂಡಿ) ತಿಳಿಸಿದೆ.

ಚೆನ್ನೈ, ಕಾಂಚೀಪುರಂ, ತಿರುವಳ್ಳೂರ್‌, ಚೆಂಗಲ್‌ಪೇಟ್‌, ಕಡಲೂರು, ಕಾವೇರಿ ಜಲಾನಯನ ಪ್ರದೇಶ ಮತ್ತಿತರ ಭಾಗಗಳಲ್ಲಿ ಮಳೆಯಾಗುತ್ತಿದೆ.

ಚೆನ್ನೈ ಸೇರಿ 23 ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳನ್ನು ಬಂದ್‌ ಮಾಡಲಾಗಿದೆ. ಧರ್ಮಪುರಿ ಮತ್ತು ಶಿವಗಂಗಾ ಸೇರಿ 6 ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್‌ ಮಾಡಲಾಗಿದೆ.

ಮಳೆಯ ಪರಿಣಾಮ ಹಲವೆಡೆ ವಾಹನಗಳ ಸಂಚಾರಕ್ಕೆ ತೊಡಕುಂಟಾಗಿದೆ. ವಿಮಾನ ಸಂಚಾರಕ್ಕೆ ಯಾವುದೇ ತೊಂದರೆ ಅಗಿಲ್ಲ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು