ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಪುಣೆ: ಅತಿವೃಷ್ಟಿ, ಪ್ರವಾಹ 17 ಸಾವಿರ ಜನರ ಸ್ಥಳಾಂತರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪುಣೆ: ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಹಲವು ಭಾಗ ಇನ್ನು ಜಲಾವೃತವಾಗಿದ್ದು, 17,000ಕ್ಕೂ ಅಧಿಕ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಪಂಡರಾಪುರ ತಾಲ್ಲೂಕಿನಲ್ಲಿ ಪ್ರವಾಹಪೀಡಿತ 46 ಗ್ರಾಮಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಸುಮಾರು 14 ಮಂದಿ ಸತ್ತಿದ್ದಾರೆ.

ಗುರುವಾರದಿಂದ ಮಳೆ ಪ್ರಮಾಣ ಕಡಿಮೆ ಆಗಿದೆ. ಆದರೆ, ಜಲಾಶಯಗಳಿಂದ ಹೆಚ್ಚಿನ ನೀರು ಹೊರಬಿಟ್ಟಿರುವ ಕಾರಣ ಪಂಡರಾಪುರ ತಾಲ್ಲೂಕಿನಲ್ಲಿ ಇನ್ನೂ ಪ್ರವಾಹ ಪರಿಸ್ಥಿತಿ ಇದೆ ಎಂದು ಉಪ ವಿಭಾಗಾಧಿಕಾರಿ ಸಚಿನ್ ಧೋಲೆ ತಿಳಿಸಿದ್ದಾರೆ.

ಹಲವು ರಸ್ತೆ, ಸೇತುವೆಗಳ ಜಲಾವೃತವಾಗಿದ್ದು, ವಾಹನ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಮೊಹೊಲ್ ತಾಲ್ಲೂಕಿನಲ್ಲಿ ಸುಮಾರು 5,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಒಟ್ಟಾರೆ 18 ತಂಡಗಳು ಪ್ರವಾಹ ಪೀಡಿತವಾಗಿರುವ ಮಲ್ಶಿರಾಜ್, ದಕ್ಷಿಣ ಸೊಲ್ಲಾಪುರ ಮತ್ತು ಮೊಹೊಲ್ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು