ಶನಿವಾರ, ಸೆಪ್ಟೆಂಬರ್ 18, 2021
24 °C

ಅಶ್ಲೀಲ ಚಿತ್ರ ಪ್ರಕರಣ: ಹೊಸ ಎಫ್‌ಐಆರ್‌ನಲ್ಲಿ ನಟಿ ಗೆಹನಾ ವಸಿಷ್ಠ ಹೆಸರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಅಪರಾಧ ವಿಭಾಗದ ಪೊಲೀಸರು ಹೊಸದಾಗಿ ಎಫ್‌ಐಆರ್ ದಾಖಲಿಸಿದ್ದು, ಉದ್ಯಮಿ ರಾಜ್ ಕುಂದ್ರಾ ಅವರ ಕಂಪನಿಯ ನಿರ್ಮಾಪಕರು ಮತ್ತು ನಟಿ ಗೆಹನಾ ವಸಿಷ್ಠ ಅವರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಹಾಟ್‌ಶಾಟ್ಸ್‌ ಆ್ಯಪ್‌ಗಾಗಿ ಅಶ್ಲೀಲ ಚಿತ್ರಗಳನ್ನು ಶೂಟ್‌ ಮಾಡಲು ಒತ್ತಾಯಿಸುತ್ತಿದ್ದ ಆರೋಪದ ಮೇಲೆ ನಟಿ ಗೆಹನಾ ವಿರುದ್ಧ ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಮೊಕದ್ದಮೆ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್‌ 420(ವಂಚನೆ) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.

ಆ್ಯಪ್‌ಗಳಿಗಾಗಿ ಅಶ್ಲೀಲ ಚಿತ್ರಗಳನ್ನು ತಯಾರಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 19ರಂದು ಬಾಲಿವುಡ್‌ ನಟಿ ಶಿಲ್ಪಾಶೆಟ್ಟಿ ಪತಿ ಉದ್ಯಮಿ ರಾಜ್‌ಕುಂದ್ರಾ ಅವರನ್ನು ಪೊಲೀಸರು ಬಂಧಿಸಿದ್ದರು. ಮಂಗಳವಾರ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಕಳೆದ ವರ್ಷ ಆಗಸ್ಟ್ ಮತ್ತು ಡಿಸೆಂಬರ್ ನಡುವೆ ರಾಜ್‌ಕುಂದ್ರಾ ಈ ಉದ್ಯಮದಿಂದ ₹1.17 ಕೋಟಿ ಗಳಿಸಿದ್ದರು ಎಂದು ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು