ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2020ರ ಅಶ್ಲೀಲ ಚಿತ್ರ ಪ್ರಕರಣ: ಕುಂದ್ರಾಗೆ ಮಧ್ಯಂತರ ರಕ್ಷಣೆ ನೀಡಿದ ಹೈಕೋರ್ಟ್‌

Last Updated 18 ಆಗಸ್ಟ್ 2021, 9:28 IST
ಅಕ್ಷರ ಗಾತ್ರ

ಮುಂಬೈ: 2020ರಲ್ಲಿನ ಅಶ್ಲೀಲ ಚಿತ್ರಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ರಾಜ್‌ ಕುಂದ್ರಾ ಅವರನ್ನು ಬಂಧಿಸದಂತೆ ಬಾಂಬೆ ಹೈಕೋರ್ಟ್‌ ಬುಧವಾರ ಮಧ್ಯಂತರ ರಕ್ಷಣೆ ನೀಡಿದೆ.

ನಗರ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿದ್ದರು. ಕುಂದ್ರಾ ಅವರು ಸಲ್ಲಿಸಿರುವ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆಗಸ್ಟ್‌ 25ಕ್ಕೆ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಮೂರ್ತಿ ಎಸ್‌.ಕೆ. ಶಿಂಧೆ ಅವರು ಪೊಲೀಸರಿಗೆ ಸೂಚಿಸಿದ್ದಾರೆ.

‘ಪೊಲೀಸರು ಪ್ರತಿಕ್ರಿಯೆ ಸಲ್ಲಿಸುವವರೆಗೆ, ಅಂದರೆ ಆಗಸ್ಟ್‌ 25ರವರೆಗೆ ಮಧ್ಯಂತರ ರಕ್ಷಣೆ ನೀಡಲಾಗಿದೆ’ ಎಂದು ನ್ಯಾಯಮೂರ್ತಿ ಶಿಂಧೆ ತಿಳಿಸಿದ್ದಾರೆ.

ಅಶ್ಲೀಲ ಚಿತ್ರಗಳನ್ನು ನಿರ್ಮಿಸಿರುವ ಮತ್ತು ಅದನ್ನು ಕೆಲವು ಆ್ಯಪ್‌ಗಳಲ್ಲಿ ಪ್ರಸಾರ ಮಾಡಿರುವ ಮತ್ತೊಂದು ಪ್ರಕರಣದಲ್ಲಿ ರಾಜ್‌ ಕುಂದ್ರಾ ಅವರನ್ನು ಜುಲೈನಲ್ಲಿ ಬಂಧಿಸಲಾಗಿದ್ದು, ಸದ್ಯ ಜೈಲಿನಲ್ಲಿದ್ದಾರೆ.

2020ರ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್‌ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಬಳಿಕ, ಇದನ್ನು ಪ್ರಶ್ನಿಸಿ ಕಳೆದ ವಾರ ಹೈಕೋರ್ಟ್‌ನಲ್ಲಿ ರಾಜ್‌ ಕುಂದ್ರಾ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT