ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹಾ’ ಗೃಹ ಸಚಿವರ ವಿರುದ್ಧ ಆರೋಪ: ಕೇಂದ್ರದ ಹಸ್ತಕ್ಷೇಪ ಅಗತ್ಯ ಎಂದ ರಾಜ್ ಠಾಕ್ರೆ

Last Updated 21 ಮಾರ್ಚ್ 2021, 19:44 IST
ಅಕ್ಷರ ಗಾತ್ರ

ಮುಂಬೈ: ಕಳೆದ ತಿಂಗಳು ಉದ್ಯಮಿ ಮುಕೇಶ್‌ ಅಂಬಾನಿ ಅವರ ನಿವಾಸದ ಬಳಿ ಪತ್ತೆಯಾದ ಸ್ಫೋಟಕಗಳು ತುಂಬಿದ್ದ ವಾಹನದ ಹಿಂದಿನ ಸತ್ಯವನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರದ ಹಸ್ತಕ್ಷೇಪದ ಅಗತ್ಯವಿದೆ ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನಾ (ಎಂಎನ್‌ಎಸ್‌) ಮುಖ್ಯಸ್ಥ ರಾಜ್‌ ಠಾಕ್ರೆ ಹೇಳಿದ್ದಾರೆ.

ಈ ಪ್ರಕರಣದಲ್ಲಿನ ಕೆಲ ಮೂಲಭೂತ ಅಂಶಗಳ ಬಗ್ಗೆ ಬೆಳಕು ಚೆಲ್ಲುವಲ್ಲಿ ಮಹಾರಾಷ್ಟ್ರ ಸರ್ಕಾರ ಅಸಮರ್ಥವಾಗಿದೆ ಎಂದು ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಪ್ರಕರಣದಲ್ಲಿ ಸತ್ಯವನ್ನು ಹೊರಗೆ ತರಲು ಕೇಂದ್ರವು ಸಹಾಯ ಮಾಡಬೇಕು. ಸ್ಫೋಟಕಗಳಿಂದ ತುಂಬಿದ ವಾಹನವನ್ನು ಅಲ್ಲಿ ಯಾರು ಇರಿಸಿದರು ಮತ್ತು ಯಾರ ಸೂಚನೆಯ ಮೇರೆಗೆ ಇದನ್ನು ಮಾಡಲಾಯಿತು ಎಂಬುದನ್ನು ಪತ್ತೆ ಮಾಡಬೇಕಿದೆ ಎಂದರು. ಈ ಮೂಲ ಪ್ರಶ್ನೆಗಳನ್ನು ಮರೆಯಬಾರದು. ಇಲ್ಲದಿದ್ದರೆ ಈ ಪ್ರಕರಣವೂ ನಟ ಸುಶಾಂತ್ ಸಿಂಗ್ ರಜಪೂತ್ ಅವರ (ಸಾವು) ಪ್ರಕರಣದಂತೆಯೇ ಸಾಗುತ್ತದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT