ಜೈಪುರ:ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯಲ್ಲಿ35 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಿಎಸ್‌ಎಫ್‌ನ ಮೂವರು ಸಿಬ್ಬಂದಿ ಸೇರಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಸಂತ್ರಸ್ತೆ ರೈಸಿಂಗ್ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.ಆಕೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದು, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ.
ಮಹಿಳೆಯು ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆ ನೀಡಿದ ನಂತರ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.ಆರೋಪಿಗಳ ಪೈಕಿ ಬಿಎಸ್‌ಎಫ್‌ನ ಒಬ್ಬ ಹೆಡ್ ಕಾನ್‌ಸ್ಟೆಬಲ್, ಇಬ್ಬರು ಕಾನ್‌ಸ್ಟೆಬಲ್‌ಗಳು ಸೇರಿದ್ದಾರೆ ಎಂದು ಶ್ರೀ ಗಂಗಾನಗರದ ಪೊಲೀಸ್ ವರಿಷ್ಠಾಧಿಕಾರಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
‘ಪರಿಚಿತ ವ್ಯಕ್ತಿಗಳು ತುಪ್ಪ ಮತ್ತು ಇತರ ವಸ್ತುಗಳನ್ನು ಖರೀದಿಸುವ ನೆಪದಲ್ಲಿ ತನ್ನನ್ನು ಬಿಎಸ್ಎಫ್ ಸಿಬ್ಬಂದಿ ಹಾಜರಿದ್ದ ಏಕಾಂತ ಸ್ಥಳಕ್ಕೆ ಕರೆದೊಯ್ದರು. ನಂತರ ಅಲ್ಲಿ ನನ್ನ ಮೇಲೆ ಅತ್ಯಾಚಾರ ವೆಸಗಿದರು ಎಂದು 35 ವರ್ಷದ ಮಹಿಳೆ ಹೇಳಿದ್ದಾಳೆ’ ಎಂದು ಅವರು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.