ಬುಧವಾರ, ಆಗಸ್ಟ್ 17, 2022
25 °C

ರಾಜಸ್ಥಾನ: ಬಾಲಕಿ ಮೃತದೇಹ ಪತ್ತೆ, ಅತ್ಯಾಚಾರ ಶಂಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ: ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಸುವಾಲ ಗ್ರಾಮದಲ್ಲಿ 16 ವರ್ಷ ವಯಸ್ಸಿನ ಬಾಲಕಿ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಬಾಲಕಿಯ ಮನೆಯ ಹಿಂಭಾಗದ ಹೊಲದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹವು ಕತ್ತು ಸೀಳಿದ ಸ್ಥಿತಿಯಲ್ಲಿತ್ತು. ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಬಾರ್ಮರ್ ಎಸ್‌ಪಿ ಆನಂದ್ ಶರ್ಮಾ ತಿಳಿಸಿದ್ದಾರೆ. ಆದಾಗ್ಯೂ, ಅತ್ಯಾಚಾರ ಎಸಗಲಾಗಿದೆಯೇ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆ ವರದಿ ಬಳಿಕವಷ್ಟೇ ಖಚಿತವಾಗಿ ಹೇಳಲು ಸಾಧ್ಯ ಎಂದು ಅವರು ತಿಳಿಸಿದ್ದಾರೆ.

ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇಬ್ಬರು ಯುವಕರ ಮೇಲೆ ಅನುಮಾನವಿದ್ದು, ಅವರು ಸದ್ಯ ತಲೆಮರೆಸಿಕೊಂಡಿದ್ದಾರೆ ಎಂದೂ ಪೊಲೀಸರು ಹೇಳಿದ್ದಾರೆ.

ಸಂತ್ರಸ್ತೆಯು ಭಾನುವಾರ ರಾತ್ರಿ ಮನೆಯಲ್ಲಿ ಮಲಗಿ ನಿದ್ದೆ ಮಾಡಿದ್ದಳು. ಮರುದಿನ ಬೆಳಿಗ್ಗೆ ನೋಡುವಾಗ ಮನೆ ಹಿಂಭಾಗದ ಹೊಲದಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಸಂತ್ರಸ್ತೆಯ ಕುಟುಂಬದವರು ತಿಳಿಸಿದ್ದಾರೆ.

ಕುಟುಂಬದ ಸದಸ್ಯರು ಇನ್ನಷ್ಟೇ ದೂರು ದಾಖಲಿಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು