ಲಂಚ: ಆರೋಪಿಗಳಿಗೆ ಶಿಕ್ಷೆಯಾಗುವವರೆಗೆ ಹೆಸರು ಬಹಿರಂಗಬೇಡ- ರಾಜಸ್ಥಾನ ಎಸಿಬಿ

ಜೈಪುರ: ಲಂಚ ಪಡೆದ ಆರೋಪ ಎದುರಿಸುತ್ತಿರುವವರಿಗೆ ಹಾಗೂ ಶಂಕಿತರಿಗೆ ಕೋರ್ಟ್ ಶಿಕ್ಷೆ ವಿಧಿಸುವವರೆಗೆ, ಅವರ ಹೆಸರು ಹಾಗೂ ಭಾವಚಿತ್ರಗಳನ್ನು ಬಹಿರಂಗಪಡಿಸಬಾರದು ಎಂದು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ಸಂಸ್ಥೆ (ಎಸಿಬಿ) ತನ್ನ ಅಧಿಕಾರಿಗಳಿಗೆ ಬುಧವಾರ ಸೂಚಿಸಿದೆ.
ಎಡಿಜಿ ಹೇಮಂತ ಪ್ರಿಯದರ್ಶಿ ಅವರು ಹೆಚ್ಚುವರಿಯಾಗಿ ಎಸಿಬಿ ಮುಖ್ಯಸ್ಥರಾಗಿ ಅಧಿಕಾರವಹಿಸಿಕೊಂಡ ಕೂಡಲೇ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.
‘ಆರೋಪ ಎದುರಿಸುತ್ತಿರುವವರ ಹುದ್ದೆ, ಇಲಾಖೆ ಹೆಸರನ್ನು ಮಾತ್ರ ಮಾಧ್ಯಮಗಳೊಂದಿಗೆ ಹಂಚಿಕೊಳ್ಳಬೇಕು’ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶಕ್ಕೆ ವಿರೋಧ ಪಕ್ಷ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಇಂಥ ಆದೇಶದ ಹಿಂದಿರುವ ಉದ್ದೇಶವೇನು ಎಂದು ಪ್ರಶ್ನಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.