ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾಗೆ ಕೋವಿಡ್–19 ದೃಢ

Last Updated 4 ಸೆಪ್ಟೆಂಬರ್ 2020, 6:12 IST
ಅಕ್ಷರ ಗಾತ್ರ

ಜೈಪುರ:ರಾಜಸ್ಥಾನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಅವರು ತಮಗೆಕೋವಿಡ್‌–19 ಸೋಂಕು ದೃಢಪಟ್ಟಿದೆ ಎಂದು ಟ್ವೀಟ್‌ ಮಾಡಿದ್ದಾರೆ.

‘ನಿನ್ನೆ, ನಾನು ಮನೆಗೆ ಮರಳಿದ ಬಳಿಕ ಕೋವಿಡ್–19 ಪರೀಕ್ಷೆ ನಡೆಸಲಾಯಿತು. ಯಾವುದೇ ಗುಣಲಕ್ಷಣಗಳಿಲ್ಲದಿದ್ದರೂ ನನಗೆ ಪಾಸಿಟಿವ್‌ ಬಂದಿದೆ. ವೈದ್ಯರು ಪ್ರತ್ಯೇಕವಾಸದಲ್ಲಿರಲು ಸಲಹೆ ನೀಡಿದ್ದಾರೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ. ಬೆಂಬಲಕ್ಕಾಗಿ ಧನ್ಯವಾದಗಳು’ ಎಂದು ಟ್ವೀಟ್‌ ಮಾಡಿದ್ದಾರೆ.

ಇದಕ್ಕೂ ಮೊದಲು ಸೆಪ್ಟೆಂಬರ್‌ 2 ರಂದುರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್‌ ಅವರಿಗೆ ಕೋವಿಡ್ ದೃಢಪಟ್ಟಿತ್ತು. ರಾಜಸ್ಥಾನದಲ್ಲಿ ಇದುವರೆಗೆ ಒಟ್ಟು 84,674 ಸೋಂಕು ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 70,674 ಸೋಂಕಿತರು ಗುಣಮುಖರಾಗಿದ್ದು, 1,081 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT