ಅತ್ಯಾಚಾರ ಆರೋಪ: ರಾಜಸ್ಥಾನದ ಬಿಜೆಪಿ ಶಾಸಕ ಪ್ರತಾಪ್ ಲಾಲ್ ವಿರುದ್ಧ ಎಫ್ಐಆರ್

ಉದಯಪುರ: ಮದುವೆಯ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ನೀಡಿದ ದೂರಿನ ಅನ್ವಯ ರಾಜಸ್ಥಾನದ ಗೋಗುಂಡ ಕ್ಷೇತ್ರದ ಬಿಜೆಪಿ ಶಾಸಕ ಪ್ರತಾಪ್ ಲಾಲ್ ಭೀಲ್ ವಿರುದ್ಧ ಸುಖರ್ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿದೆ.
ಮಧ್ಯಪ್ರದೇಶದ ಮೂಲದ 35 ವರ್ಷದ ಮಹಿಳೆಯೊಬ್ಬರು ‘ಶಾಸಕರು ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ, ಹಲವು ಬಾರಿ ಅತ್ಯಾಚಾರ ಮಾಡಿದ್ದಾರೆ‘ ಎಂದು ದೂರು ನೀಡಿದ್ದರು.
ಓದಿ: ಹರಿಯಾಣದಲ್ಲಿ ಲಗ್ನ ಪತ್ರಿಕೆ ಮೇಲೆ ‘ರೈತ ಪರ ಘೋಷಣೆ‘
‘ಈ ಹಿನ್ನೆಲೆಯಲ್ಲಿ ಗುರುವಾರ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಿ, ಅವರಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ‘ ಎಂದು ಉದಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಪಚಾರ್ ಹೇಳಿದ್ದಾರೆ.
‘ದೂರು ನೀಡಿರುವ ಸಂತ್ರಸ್ತೆ ಹಾಗೂ ಶಾಸಕರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದು, ಕೆಲವು ವರ್ಷಗಳಿಂದ ಇವರಿಬ್ಬರೂ ಸಂಪರ್ಕದಲ್ಲಿದ್ದಾರೆ‘ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಈ ಕುರಿತು ಶಾಸಕರು ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.