ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ ವ್ಯಕ್ತಿ ಬಂಧಿಸಿದ ಬಿಎಸ್‌ಎಫ್‌

Last Updated 27 ಸೆಪ್ಟೆಂಬರ್ 2022, 14:12 IST
ಅಕ್ಷರ ಗಾತ್ರ

ನವದೆಹಲಿ: 20 ವರ್ಷ ವಯಸ್ಸಿನ ಪಾಕಿಸ್ತಾನಿ ವ್ಯಕ್ತಿಯನ್ನು ರಾಜಸ್ಥಾನದ ಶ್ರೀ ಗಂಗನಗರ ವಲಯದ ಭಾರತ– ಪಾಕಿಸ್ತಾನ ಗಡಿ ಬಳಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಸಿಬ್ಬಂದಿ ಮಂಗಳವಾರ ಬಂಧಿಸಿದ್ದಾರೆ ಎಂದು ಬಿಎಸ್‌ಎಫ್‌ ವಕ್ತಾರರು ತಿಳಿಸಿದ್ದಾರೆ.

ಸಂಶಯಾಸ್ಪದವಾಗಿ ನಡೆದುಕೊಳ್ಳುತ್ತಿದ್ದ ಕಾರಣ ಮೊಹಮ್ಮದ್‌ ವಾಖಸ್‌ ಎಂಬಾತನನ್ನು ಸೋಮವಾರ ಸಂಜೆ ಬಂಧಿಸಲಾಗಿದೆ. ತಾನು ತಹ್ರೀಕ್‌–ಇ– ಲಕ್ಕಾಯಿಕ್‌ ಸಂಘಟನೆಯ ಅನುಯಾಯಿ ಆಗಿದ್ದು, ಸಂಘಟನೆಯ ಸಿದ್ಧಾಂತಗಳನ್ನು ಪ್ರಚಾರ ಮಾಡಲು ಭಾರತವನ್ನು ಪ್ರವೇಶಸಿದ್ದಾಗಿ ಪ್ರಾಥಮಿಕ ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದಾನೆ ಎಂದು ವಕ್ತಾರರು ತಿಳಿಸಿದ್ದಾರೆ.

ಆತ ಪಾಕಿಸ್ತಾನದ ಬಹವಾಲ್‌ನಗರ ಜಿಲ್ಲೆಯ ಕರಂಪುರ ಗ್ರಾಮದ ನಿವಾಸಿ.

ಸದ್ಯ ಗುಪ್ತಚರ ಇಲಾಖೆ ಮತ್ತು ಭದ್ರತಾ ಸಂಸ್ಥೆಗಳ ಜಂಟಿ ತಂಡ ಆತನ ವಿಚಾರಣೆ ನಡೆಸುತ್ತಿದೆ. ಶೀಘ್ರದಲ್ಲೇ ಆತನನ್ನು ಸ್ಥಳೀಯ ಪೊಲೀಸ್‌ ಠಾಣೆಗೆ ಒಪ್ಪಿಸಲಾಗುವುದು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT