ಬುಧವಾರ, ಮೇ 18, 2022
24 °C

ರಾಜಸ್ಥಾನ: ಆಯುಷ್‌ ನೀತಿ –2020ಕ್ಕೆ ಸಂಪುಟ ಅಂಗೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ: ರಾಜಸ್ಥಾನ ಸಚಿವ ಸಂಪುಟವು ಆಯುಷ್‌ ನೀತಿ –2020ಕ್ಕೆ ಅಂಗೀಕಾರ ನೀಡಿದ್ದು, ಈ ಮೂಲಕ ಆಯುರ್ವೇದ, ಯುನಾನಿ, ಹೋಮಿಯೋಪತಿ, ಯೋಗ ಮತ್ತು ಪ್ರಕೃತಿ ಚಿಕಿತ್ಸೆಗೆ ಉತ್ತೇಜನ ನೀಡಲು ಮುಂದಾಗಿದೆ.

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಚಿವ ಸಂಪುಟ ಸಭೆ ನಡೆದಿದೆ. ಈ ವೇಳೆ ಆಯುಷ್‌ ನೀತಿಗೆ ಅಂಗೀಕಾರ ನೀಡಲಾಗಿದೆ.

ರಾಜ್ಯ ಆಯುಷ್‌ ನೀತಿಯಡಿಯಲ್ಲಿ ಆಯುಷ್‌ ಚಿಕಿತ್ಸಾ ವಿಧಾನಗಳ ಮೂಲಕ ವಿವಿಧ ಕಾಯಿಲೆಗಳ ಚಿಕಿತ್ಸೆಗಾಗಿ ಗುಣಾತ್ಮಕ ಸೇವೆಗಳನ್ನು ಉತ್ತೇಜಿಸಲಾಗುವುದು ಎಂದು ಅಶೋಕ್‌ ಗೆಹ್ಲೋಟ್‌ ಹೇಳಿದ್ದಾರೆ.

ಆಯುಷ್‌ ವೈದ್ಯಕೀಯ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಮತ್ತು ಉತ್ತಮ ಗುಣಮಟ್ಟದ ಆಯುಷ್ ಔಷಧಿಗಳನ್ನು ತಯಾರಿಸಲು ಹೆಚ್ಚು ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯ ರಸ್ತೆ ಮಾರ್ಗದ ಬಸ್‌ಗಳಲ್ಲಿ ಟಿಕೆಟ್‌ ರಹಿತ ಪ್ರಯಾಣಕ್ಕೆ ಹೆಚ್ಚುವರಿ ದಂಡ ವಿಧಿಸಲು ಸಂಪುಟ ನಿರ್ಧರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು