ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ ಸಚಿವ ಸಂಪುಟ ಪುನರ್‌ರಚನೆ: ಪೈಲಟ್ ಬಣದ ಐವರಿಗೆ ಸ್ಥಾನ

Last Updated 21 ನವೆಂಬರ್ 2021, 12:19 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನ ಸಚಿವ ಸಂಪುಟ ಪುನರ್‌ರಚನೆಯಾಗಿದ್ದು, ಒಟ್ಟು 15 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಚಿನ್ ಪೈಲಟ್ ಬಣದ ಐವರಿಗೆ ಸಚಿವ ಸ್ಥಾನ ನೀಡಲಾಗಿದ್ದು,ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲಕಲ್‌ರಾಜ್ ಮಿಶ್ರಾ ಅವರು ಪ್ರಮಾಣವಚನ ಬೋಧಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅಜಯ್ ಮಾಕೇನ್ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಉಪಸ್ಥಿತರಿದ್ದರು.

ಪೈಲಟ್ ಬಣದಲ್ಲಿ ಗುರುತಿಸಿಕೊಂಡಿರುವ ಹೇಮರಾಮ್ ಚೌಧರಿ, ಮುರಾರಿ ಲಾಲ್ ಮೀನಾ,ರಾಜೇಂದ್ರ ಸಿಂಗ್ ಗುಧ,ಬ್ರಿಜೇಂದ್ರ ಓಲಾ ಮತ್ತುಜಹಿದಾ ಖಾನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಉಳಿದಂತೆ ಶಾಸಕರಾದ ಮಹೇಂದ್ರಜೀತ್ ಸಿಂಗ್ ಮಾಳವೀಯ, ರಾಮ್‌ಲಾಲ್ ಜಾಟ್, ಮಹೇಶ್ ಜೋಶಿ, ಗೋವಿಂದ್ ರಾಮ್ ಮೇಘವಾಲ್, ಶಕುಂತಲಾ ರಾವತ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ.‌

ಮಮತಾ ಭೂಪೇಶ್‌, ಭಜನ್‌ ಲಾಲ್‌ ಜತಾವ್‌, ಟಿಕಾರಾಂ ಜುಲ್ಲಿ ಅವರನ್ನು ಸಂಪುಟ ದರ್ಜೆಗೆ ಏರಿಸಲಾಗಿದೆ. ಕಳೆದವರ್ಷ ಸಂಪುಟದಿಂದ ಹೊರಹಾಕಲಾಗಿದ್ದ, ರಮೇಶ್ ಮೀನಾ ಮತ್ತು ವಿಶ್ವೇಂದ್ರ ಸಿಂಗ್ ಅವರನ್ನು ಮತ್ತೆ ಸೇರಿಸಿಕೊಳ್ಳಲಾಗಿದೆ.

ಇದೀಗ ಒಟ್ಟು ಸಚಿವರ ಸ್ಥಾನ 30ಕ್ಕೆ ತಲುಪಿದೆ.

ಅಶೋಕ್ ಗೆಹಲೋತ್ ನೇತೃತ್ವದ ಸರ್ಕಾರ 2018ರಲ್ಲಿ ಅಧಿಕಾರಕ್ಕೇರಿದ ಬಳಿಕ ಇದೇ ಮೊದಲ ಬಾರಿಗೆರಾಜಸ್ಥಾನದಲ್ಲಿ ಸಚಿವ ಸಂಪುಟ ಪುನರ್‌ರಚನೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT