ಬುಧವಾರ, ಜನವರಿ 19, 2022
26 °C

ಸಕಾರಾತ್ಮಕ ಸಂದೇಶ ರವಾನಿಸಿದೆ ರಾಜಸ್ಥಾನ ಸಂಪುಟ ಪುನರ್‌ರಚನೆ: ಸಚಿನ್‌ ಪೈಲಟ್‌

PTI Updated:

ಅಕ್ಷರ ಗಾತ್ರ : | |

Prajavani

ಜೈಪುರ: ಸಂಪುಟ ಪುನರ್ ರಚನೆಯು ರಾಜಸ್ಥಾನ ರಾಜ್ಯದಾದ್ಯಂತ ಸಕಾರಾತ್ಮಕ ಸಂದೇಶವನ್ನು ಸಾರಿದೆ ಎಂದು ಕಾಂಗ್ರೆಸ್‌ ನಾಯಕ ಮತ್ತು ರಾಜಸ್ಥಾನದ ಮಾಜಿ  ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ ಹೇಳಿದ್ದಾರೆ.

ಪಕ್ಷದಲ್ಲಿ ವಿವಿಧ ಬಣಗಳಿವೆ ಎಂಬುದನ್ನು ಅವರು ಅಲ್ಲಗಳೆದಿದ್ದಾರೆ. ಉಪ ಮುಖ್ಯಮಂತ್ರಿಯಾಗಿದ್ದ ಅವರನ್ನು ಕಳೆದ ವರ್ಷ ಬಂಡಾಯ ಚಟುವಟಿಕೆಗಳ ಕಾರಣ ವಜಾ ಮಾಡಲಾಗಿತ್ತು.

ಸಂಪುಟದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಜನರ ಸಂಖ್ಯೆ ಹೆಚ್ಚಿಸಬೇಕೆಂಬ ತಮ್ಮ ಬೇಡಿಕೆಗೆ ಮನ್ನಣೆ ದೊರಕಿದೆ. ತಾವು ಎತ್ತಿದ್ದ ಇತರ ಕೆಲವು ಬೇಡಿಕೆಗಳೂ ಈಡೇರಿದ್ದು ತಮಗೆ ಸಂತಸವಾಗಿದೆ ಎಂದು ಹೇಳಿದ್ದಾರೆ.

‘ಸಂಪುಟದಲ್ಲಿ ಪರಿಶಿಷ್ಟ ಜಾತಿಯ ನಾಲ್ವರು ಸಚಿವರನ್ನು ಸೇರಿಸಲಾಗುತ್ತಿದೆ. ಅಲ್ಲದೆ ಬುಡಕಟ್ಟು ಜನಾಂಗ ಮತ್ತು ಮಹಿಳೆಯರ ಪ್ರಾತಿನಿಧ್ಯ ಕೂಡ ಹೆಚ್ಚಾಗಿದೆ. ಇದು ಅಗತ್ಯವಾಗಿತ್ತು’ ಎಂದು ಅವರು ವರದಿಗಾರರಿಗೆ ತಿಳಿಸಿದ್ದಾರೆ. ಪಕ್ಷದಲ್ಲಿ ಬಣಗಳು ಇಲ್ಲ. 2023ರ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದಿದ್ದಾರೆ.

ಇವುಗಳನ್ನೂ ಓದಿ

ರಾಜಸ್ಥಾನ ಸಂಪುಟ ಪುನರ್‌ರಚನೆ: 12 ಮಂದಿ ಹೊಸಬರು, ಪೈಲಟ್ ಬಣದಿಂದ ಐವರಿಗೆ ಅವಕಾಶ

 

ರಾಜಸ್ಥಾನ ಸಂಪುಟ ಪುನರ್‌ರಚನೆ: ಇಂದು ಸಂಜೆ 4ಕ್ಕೆ 15 ಸಚಿವರ ಪ್ರಮಾಣ ವಚನ ಸ್ವೀಕಾರ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು