ಮಂಗಳವಾರ, ಡಿಸೆಂಬರ್ 1, 2020
18 °C

ದೇಶ ಒಡೆಯಲು ಬಿಜೆಪಿ ಸೃಷ್ಟಿಸಿದ ಪದ ‘ಲವ್ ಜಿಹಾದ್’: ಅಶೋಕ್ ಗೆಹ್ಲೋಟ್

ಎಎನ್‌ಐ‌ Updated:

ಅಕ್ಷರ ಗಾತ್ರ : | |

Ashok Gehlot PTI image

ಜೈಪುರ: ‘ಲವ್ ಜಿಹಾದ್’ ಎಂಬುದು ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಲು ಮತ್ತು ದೇಶವನ್ನು ಒಡೆಯಲು ಬಿಜೆಪಿ ಸೃಷ್ಟಿಸಿದ ಪದ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟೀಕಿಸಿದ್ದಾರೆ.

ಮದುವೆಯೆಂಬುದು ವೈಯಕ್ತಿಕ ನಿರ್ಧಾರವಾಗಿದ್ದು ಬಿಜೆಪಿಯು ಅದಕ್ಕೂ ನಿರ್ಬಂಧ ವಿಧಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

‘ದೇಶವನ್ನು ಒಡೆಯಲು ಮತ್ತು ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡಲು ಬಿಜೆಪಿ ಸೃಷ್ಟಿಸಿರುವ ಪದವೇ ‘ಲವ್ ಜಿಹಾದ್’. ಮದುವೆಯೆಂಬುದು ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಚಾರ. ಅದಕ್ಕೆ ನಿರ್ಬಂಧ ವಿಧಿಸಲು ಕಾನೂನು ರೂಪಿಸುವುದು ಅಸಾಂವಿಧಾನಿಕ. ಇದು ಯಾವ ನ್ಯಾಯಾಲಯದಲ್ಲೂ ಒಪ್ಪಿತವಾಗದು. ಪ್ರೀತಿಯಲ್ಲಿ ಜಿಹಾದ್‌ಗೆ ಸ್ಥಾನವಿಲ್ಲ' ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: 

‘ವಯಸ್ಕರ ನಡುವಣ ಸಮ್ಮತಿಗೆ ಸರ್ಕಾರದ ಅನುಮತಿ ಅಗತ್ಯ ಎನ್ನುವಂಥ ವಾತಾವರಣವನ್ನು ಅವರು (ಬಿಜೆಪಿ) ಸೃಷ್ಟಿಸುತ್ತಿದ್ದಾರೆ. ವೈಯಕ್ತಿಕ ನಿರ್ಧಾರವಾದ ಮದುವೆಯ ಮೇಲೆ ಅವರು ನಿರ್ಬಂಧ ವಿಧಿಸುತ್ತಿದ್ದಾರೆ. ಇದು ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಂಡಂತೆ' ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ರೂಪಿಸುವುದಾಗಿ ಅಲಹಾಬಾದ್ ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಇತ್ತೀಚೆಗೆ ಹೇಳಿದ್ದರು. ಲವ್ ಜಿಹಾದ್ ತಡೆ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸುವುದಾಗಿ ಮಧ್ಯಪ್ರದೇಶ ಗೃಹಸಚಿವರೂ ಇತ್ತೀಚೆಗೆ ಹೇಳಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು