ಬುಧವಾರ, ಮಾರ್ಚ್ 22, 2023
26 °C

ರಾಜಸ್ಥಾನ | ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟ: 5 ಸಾವು, 49 ಮಂದಿಗೆ ಗಾಯ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಜೋಧಪುರ: ರಾಜಸ್ಥಾನದ ಜೋಧಪುರದಲ್ಲಿ ಮದುವೆ ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಐದು ಮಂದಿ ಮೃತಪಟ್ಟಿದ್ದು, 49 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಭೂಂಗಾರ ಗ್ರಾಮದಲ್ಲಿ ಮನೆಯ ಸ್ಟೋರ್ ರೂಂನಲ್ಲಿ ಇರಿಸಿಲಾಗಿದ್ದ ಸಿಲಿಂಡರ್‌‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ ಎಂದು ಜೋಧಪುರ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕಯಾಲ್ ಮಾಹಿತಿ ನೀಡಿದ್ದಾರೆ. 

ಗಾಯಾಳುಗಳನ್ನು ಎಂಜಿಎಚ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ.

 

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು