ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಲ್ಯಾಕ್‌ ಫಂಗಸ್ ಸಾಂಕ್ರಾಮಿಕ ರೋಗ; ರಾಜಸ್ಥಾನ ಅಧಿಸೂಚನೆ

Last Updated 19 ಮೇ 2021, 11:01 IST
ಅಕ್ಷರ ಗಾತ್ರ

ಜೈಪುರ: ಕೋವಿಡ್‌ನಿಂದ ಚೇತರಿಸಿಕೊಳ್ಳುತ್ತಿರುವವರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಮ್ಯೂಕರ್‌ಮೈಕೊಸಿಸ್‌ (ಕಪ್ಪು ಶಿಲೀಂಧ್ರ ಅಥವಾ ಬ್ಲ್ಯಾಕ್‌ ಫಂಗಸ್)‌ ಸೋಂಕನ್ನು ರಾಜಸ್ಥಾನ ಸರ್ಕಾರವು ಸಾಂಕ್ರಾಮಿಕ ರೋಗ ಎಂದು ಘೋಷಿಸಿದೆ.

ಪ್ರಸ್ತುತ ರಾಜಸ್ಥಾನದಲ್ಲಿ ಸುಮಾರು 100 ಜನರು ಬ್ಲ್ಯಾಕ್‌ ಫಂಗಸ್‌ ಸೋಂಕಿಗೆ ಒಳಗಾಗಿದ್ದು, ಜೈಪುರದ ಸವಾಯಿ ಮಾನ್‌ ಸಿಂಗ್‌ (ಎಸ್‌ಎಂಎಸ್‌) ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್‌ ತೆರೆದು ಚಿಕಿತ್ಸೆ ನೀಡಲಾಗುತ್ತಿದೆ.

ರಾಜಸ್ಥಾನ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಅಡಿಯಲ್ಲಿ 'ಮ್ಯೂಕರ್‌ಮೈಕೊಸಿಸ್‌' ಸಾಂಕ್ರಾಮಿಕ ರೋಗ ಎಂದು ರಾಜ್ಯದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಖಿಲ್‌ ಅರೋರಾ ಅಧಿಸೂಚನೆ ಹೊರಡಿಸಿದ್ದಾರೆ.

ಕೊರೊನಾ ವೈರಸ್‌ ಮತ್ತು ಬ್ಲ್ಯಾಕ್‌ ಫಂಗಸ್‌ ಎರಡೂ ಕಾಯಿಲೆಗಳಿಗೂ ಸಂಯೋಜಿತ ಚಿಕಿತ್ಸೆ ಖಚಿತ ಪಡಿಸುವ ನಿಟ್ಟಿನಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಅಖಿಲ್‌ ಅರೋರಾ ತಿಳಿಸಿದ್ದಾರೆ.

ತಜ್ಞರ ಪ್ರಕಾರ, ಕೋವಿಡ್‌ನಿಂದ ಚೇತರಿಸಿಕೊಳ್ಳುತ್ತಿರುವ ಮತ್ತು ಸಕ್ಕರೆ ಕಾಯಿಲೆ ಇರುವವರಲ್ಲಿ ಬ್ಲ್ಯಾಕ್‌ ಫಂಗಸ್‌ ಹೆಚ್ಚು ಕಾಣಿಸಿಕೊಳ್ಳುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT